ಆರ್​ಸಿಬಿ ಗೆದ್ದ ಬಳಿಕ ಚಿಕ್ಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ಪ್ರಶಾಂತ್ ನೀಲ್

Updated on: Jun 04, 2025 | 12:04 PM

ಆರ್​ಸಿಬಿ ಇದೇ ಮೊದಲ ಬಾರಿಗೆ ಕಪ್ ಗೆದ್ದಿದೆ. ಈ ವಿಚಾರ ಖುಷಿ ನೀಡಿದೆ. ಈ ಮಧ್ಯೆ ಪ್ರಶಾಂತ್ ನೀಲ್ ಅವರು ಚಿಕ್ಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ. ಪ್ರಶಾಂತ್ ನೀಲ್ ಅವರನ್ನು ಎಲ್ಲರೂ ಕೊಂಡಾಡಿದ್ದಾರೆ.

ಪ್ರಶಾಂತ್ ನೀಲ್ (Prashanth Neel) ಅವರು ಪಕ್ಕಾ ‘ಆರ್​ಸಿಬಿ’ ಅಭಿಮಾನಿ. ಹೀಗಾಗಿ, ಸಮಯ ಮಾಡಿಕೊಂಡು ಐಪಿಎಲ್ ಮ್ಯಾಚ್ ನೋಡುತ್ತಾರೆ. ಜೂನ್ 3ರಂದು ಆರ್​ಸಿಬಿ ಕಪ್ ಗೆದ್ದಿದೆ. ಈ ಖುಷಿಯ ಕ್ಷಣವನ್ನು ಪ್ರಶಾಂತ್ ನೀಲ್ ಅವರು ಚಿಕ್ಕ ಮಕ್ಕಳಂತೆ ಕುಣಿದು ಕುಪ್ಪಳಿಸಿದ್ದಾರೆ. ಈ ಸಂದರ್ಭದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಪ್ರಶಾಂತ್ ನೀಲ್ ಅವರ ಕ್ರಿಕೆಟ್ ಪ್ರೇಮವನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jun 04, 2025 12:02 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More