ಆದಿಚುಂಚನಗಿರಿಗೆ ಸೆಂಟ್ರಲ್ ಮಿನಿಸ್ಟರ್ ಕುಮಾರಣ್ಣ ಖಡಕ್​ ಎಂಟ್ರಿ; ಹೇಗಿತ್ತು ನೋಡಿ

|

Updated on: Jun 16, 2024 | 2:44 PM

ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ಎನ್​ಡಿಎ ನೇತೃತ್ವದ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ಇದರ ಬೆನ್ನಲ್ಲೇ ಇಂದು(ಜೂ.16) ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮಂಗಳ ವಾದ್ಯಗಳೊಂದಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು.

ಮಂಡ್ಯ, ಜೂ.16: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ(HD Kumaraswamy) ಅವರು ಎನ್​ಡಿಎ ನೇತೃತ್ವದ ಸರ್ಕಾರದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾಗಿದ್ದಾರೆ. ಈ ಹಿನ್ನಲೆ ನಿನ್ನೆ(ಜೂ.15) ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಇಂದು(ಜೂ.16) ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಮಂಗಳ ವಾದ್ಯಗಳೊಂದಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು. ಬಳಿಕ ಶ್ರೀಗಳೊಂದಿಗೆ ಕಾಲಭೈರವೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಹೆಚ್​ಡಿಕೆ ಗೆ ಮಾಜಿ ಸಚಿವ ಪುಟ್ಟರಾಜು, ಮಾಜಿ ಶಾಸಕ ಸುರೇಶಗೌಡ ಸೇರಿ ಜಿಲ್ಲೆಯ ಮೈತ್ರಿ ನಾಯಕರು ಸಾಥ್ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ