ಮೈಸೂರು: ದಸರಾ ಆನೆಗಳಿಗೆ ರಾಜಾತಿಥ್ಯ ನೀಡಲು ಅರಮನೆಯಲ್ಲಿ ಭರ್ಜರಿ ಸಿದ್ಧತೆ

Edited By:

Updated on: Aug 02, 2025 | 2:20 PM

ಮೈಸೂರು ದಸರಾಗೆ ಸಿದ್ಧತೆ ಶುರುವಾಗಿದೆ. ಗಜಪಯಣಕ್ಕೆ ದಿನಗಣನೆ ಆರಂಭವಾಗಿದ್ದು, ಮೊದಲ ಹಂತದಲ್ಲಿ 9 ಆನೆಗಳು ಅರಮನೆ ಆವರಣಕ್ಕೆ ಬರಲಿವೆ. ಅವುಗಳ ಸ್ವಾಗತಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ದಸರಾ ಆನೆಗಳಿಗೆ ಮೈಸೂರು ಅರಮನೆ ಆವರಣದಲ್ಲಿ ರಾಜಾತಿಥ್ಯ ನೀಡಲು ಸಿದ್ಧತೆ ಭರದಿಂದ ಸಾಗಿದೆ. ವಿಡಿಯೋ ಇಲ್ಲಿದೆ.

ಮೈಸೂರು, ಆಗಸ್ಟ್ 2: ವಿಶ್ವವಿಖ್ಯಾತ ಮೈಸೂರು ದಸರಾ ಗಜ ಪಯಣಕ್ಕೆ ಬರುವ ಆನೆಗಳಿಗೆ ರಾಜಾತಿಥ್ಯ ನೀಡಲು ಅರಮನೆಯಲ್ಲಿ ಭರ್ಜರಿ ಸಿದ್ಧತೆ ಆರಂಭಿಸಲಾಗಿದೆ. ಆಗಸ್ಟ್ 4ರಂದು ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಿಂದ ಗಜ ಪಯಣ ಆರಂಭವಾಗಲಿದ್ದು, ಮೈಸೂರು ಅರಮನೆಗೆ ದಸರಾ ಆನೆಗಳು ಆಗಮಿಸಲಿವೆ. ಆನೆಗಳ ವಾಸದ ಸ್ಥಳ, ಮಾವುತರು, ಕಾವಾಡಿಗಳಿಗೆ ಮನೆ ನಿರ್ಮಾಣ ಚಟುವಟಿಕೆ ಭರದಿಂದ ಸಾಗಿದೆ. ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಮೈಸೂರಿಗೆ ಆಗಮಿಸಲಿವೆ.

ಮತ್ತಿಗೋಡು ಆನೆ ಶಿಬಿರದ ಅಭಿಮನ್ಯು, ಭೀಮ, ದುಬಾರೆ ಶಿಬಿರದ ಕಂಜನ್, ಧನಂಜಯ, ಪ್ರಶಾಂತ, ಬಳ್ಳೆ ಶಿಬಿರದ ಮಹೇಂದ್ರ, ದೊಡ್ಡಹರವೆ ಶಿಬಿರದ ಏಕಲವ್ಯ, ದುಬಾರೆ ಶಿಬಿರದ ಕಾವೇರಿ, ಲಕ್ಷ್ಮೀ ಆನೆ ಮೊದಲ ಹಂತದಲ್ಲಿ ಆಗಮಿಸಲಿವೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More