ಅತೀ ಕಡಿಮೆ ಮೊತ್ತಕ್ಕೆ ಆಲೌಟ್… RCB ದಾಖಲೆ ಸರಿಗಟ್ಟಿದ ರಾಯಲ್ಸ್
Paarl Royals vs Sunrisers Eastern Cape: 49 ರನ್ಗಳಿಗೆ ಸರ್ವಪತನ ಕಾಣುವ ಮೂಲಕ ಪಾರ್ಲ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಾಖಲೆಯನ್ನು ಸರಿಗಟ್ಟಿದೆ. ಐಪಿಎಲ್ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಹೀನಾಯ ದಾಖಲೆ ಆರ್ಸಿಬಿ ತಂಡದ ಹೆಸರಿನಲ್ಲಿದೆ.
ಸೌತ್ ಆಫ್ರಿಕಾ ಟಿ20 ಲೀಗ್ನ 3ನೇ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ತಂಡವು ಅತ್ಯಂತ ಕಡಿಮೆ ಮೊತ್ತಕ್ಕೆ ಆಲೌಟ್ ಆಗಿ ಹೀನಾಯ ದಾಖಲೆ ಬರೆದಿದೆ. ಪರ್ಲ್ನ ಬೋಲ್ಯಾಂಡ್ ಪಾರ್ಕ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಪಾರ್ಲ್ ರಾಯಲ್ಸ್ ಹಾಗೂ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 20 ಓವರ್ಗಳಲ್ಲಿ 4 ವಿಕೆಟ್ ಕಳೆದುಕೊಂಡು 186 ರನ್ ಕಲೆಹಾಕಿತು.
187 ರನ್ಗಳ ಗುರಿ ಪಡೆದ ಪಾರ್ಲ್ ರಾಯಲ್ಸ್ ತಂಡವು ಅನ್ರಿಕ್ ನೋಕಿಯ ದಾಳಿಗೆ ತತ್ತರಿಸಿದೆ. ಪರಿಣಾಮ ಕೇವಲ 49 ರನ್ಗಳಿಗೆ ಆಲೌಟ್ ಆಗಿದೆ. ಈ ಮೂಲಕ ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ ಅತ್ಯಲ್ಪ ಮೊತ್ತ ಕಲೆಹಾಕಿದ ಹೀನಾಯ ದಾಖಲೆಯನ್ನು ಬರೆದಿದೆ.
ಇದಕ್ಕೂ ಮುನ್ನ ಈ ದಾಖಲೆ ಪ್ರಿಟೊರಿಯಾ ಕ್ಯಾಪಿಟಲ್ಸ್ ತಂಡದ ಹೆಸರಿನಲ್ಲಿತ್ತು. 2024 ರಲ್ಲಿ ಸನ್ರೈಸರ್ಸ್ ಈಸ್ಟರ್ನ್ ಕೇಪ್ ವಿರುದ್ಧ ಪ್ರಿಟೊರಿಯಾ ಕ್ಯಾಪಿಟಲ್ಸ್ ಕೇವಲ 52 ರನ್ಗಳಿಗೆ ಆಲೌಟ್ ಆಗಿದ್ದರು.
ಇದೀಗ 49 ರನ್ಗಳಿಗೆ ಸರ್ವಪತನ ಕಾಣುವ ಮೂಲಕ ಪಾರ್ಲ್ ರಾಯಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ದಾಖಲೆಯನ್ನು ಸರಿಗಟ್ಟಿದೆ. ಐಪಿಎಲ್ ಇತಿಹಾಸದಲ್ಲೇ ಅತೀ ಕಡಿಮೆ ಮೊತ್ತಕ್ಕೆ ಆಲೌಟ್ ಆದ ಹೀನಾಯ ದಾಖಲೆ ಆರ್ಸಿಬಿ ತಂಡದ ಹೆಸರಿನಲ್ಲಿದೆ.
ಆರ್ಸಿಬಿ 2017 ರಲ್ಲಿ ಕೆಕೆಆರ್ ವಿರುದ್ಧ 49 ರನ್ಗಳಿಗೆ ಆಲೌಟ್ ಆಗಿದ್ದರು. ಇದೀಗ ಪಾರ್ಲ್ ರಾಯಲ್ಸ್ ಕೂಡ 49 ರನ್ಗಳಿಗೆ ಸರ್ವಪತನ ಕಾಣುವ ಮೂಲಕ ಪ್ರಮುಖ ಲೀಗ್ಗಳಲ್ಲಿ ಅತ್ಯಲ್ಪ ಮೊತ್ತಕ್ಕೆ ಆಲೌಟ್ ಆದ ಹೀನಾಯ ದಾಖಲೆ ಬರೆದಿದೆ.

