ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ
ಆರ್ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ತಲೆಗೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಬೆಂಗಳೂರಿನ ನಂದಿನಿ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾಗಿದೆ. ಲಕ್ಷ್ಮೀದೇವಿ ನಗರ ವಾರ್ಡ್ನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ, ಕಂಠೀರವ ಸ್ಟುಡಿಯೋ ಬಳಿ ಈ ಘಟನೆ ನಡೆದಿದೆ.
ಬೆಂಗಳೂರು, (ಡಿಸೆಂಬರ್ 25): ಅಟಲ್ ಬಿಹಾರಿ ವಾಜಪೇಯಿ ಜನ್ಮಶತಮಾನೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಈ ಘಟನೆಯಿಂದಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಮುನಿರತ್ನ ಬೆಂಬಲಿಗರು ತಮ್ಮ ಕಾರಿಗೆ ಹಾನಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಕೂಡ ಆರೋಪಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಚಂದ್ರು . ವಿಶ್ವನಾಥ್ . ಕೃಷ್ಣಮೂರ್ತಿ ಎನ್ನುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದೀಗ ಈ ಪ್ರಕರಣ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ=ಪ್ರತ್ಯಾರೋಪಗಳು ಜೋರಾಗಿವೆ.
Published on: Dec 25, 2024 02:54 PM
Latest Videos