ಬಿಜೆಪಿ ಶಾಸಕ ಮುನಿರತ್ನಗೆ ಬಿತ್ತು ಮೊಟ್ಟೆ ಏಟು: ಇಲ್ಲಿದೆ ನೋಡಿ ವಿಡಿಯೋ

|

Updated on: Dec 25, 2024 | 2:58 PM

ಆರ್​ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ತಲೆಗೆ ಮೊಟ್ಟೆ ಎಸೆದಿರುವ ಘಟನೆ ನಡೆದಿದೆ. ಬೆಂಗಳೂರಿನ ನಂದಿನಿ ಲೇಔಟ್​​ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾಗಿದೆ. ಲಕ್ಷ್ಮೀದೇವಿ ನಗರ ವಾರ್ಡ್​ನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ, ಕಂಠೀರವ ಸ್ಟುಡಿಯೋ ಬಳಿ ಈ ಘಟನೆ ನಡೆದಿದೆ.

ಬೆಂಗಳೂರು, (ಡಿಸೆಂಬರ್ 25): ಅಟಲ್ ಬಿಹಾರಿ ವಾಜಪೇಯಿ ಜನ್ಮಶತಮಾನೋತ್ಸವ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮೊಟ್ಟೆ ಎಸೆದಿದ್ದಾರೆ. ಈ ಘಟನೆಯಿಂದಾಗಿ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಮುನಿರತ್ನ ಬೆಂಬಲಿಗರು ತಮ್ಮ ಕಾರಿಗೆ ಹಾನಿ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಕೂಡ ಆರೋಪಿಸಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು, ಚಂದ್ರು . ವಿಶ್ವನಾಥ್ . ಕೃಷ್ಣಮೂರ್ತಿ ಎನ್ನುವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಇದೀಗ ಈ ಪ್ರಕರಣ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಆರೋಪ=ಪ್ರತ್ಯಾರೋಪಗಳು ಜೋರಾಗಿವೆ.

Published on: Dec 25, 2024 02:54 PM