RRR ಪ್ರೀ-ರಿಲೀಸ್ ಇವೆಂಟ್ಗೆ ಕರುನಾಡಲ್ಲಿ ರೆಡಿ ಆಗುತ್ತಿದೆ ಬೃಹತ್ ವೇದಿಕೆ; ವಿಡಿಯೋ ನೋಡಿ
RRR Pre-release Event: 100 ಎಕರೆ ಜಾಗದಲ್ಲಿ ‘ಆರ್ಆರ್ಆರ್’ ಚಿತ್ರದ ಪ್ರೀ-ರಿಲೀಸ್ ಇವೆಂಟ್ ನಡೆಯಲಿದೆ. ಬೃಹತ್ ಎಲ್ಇಡಿ ಪರದೆಗಳನ್ನು ಅಳವಡಿಸಲಾಗುತ್ತಿದೆ.
ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಆರ್ಆರ್ಆರ್’ ಚಿತ್ರ (RRR Movie) ಮಾ.25ರಂದು ವಿಶ್ವಾದ್ಯಂತ ತೆರೆಕಾಣಲಿದೆ. ಈ ಸಿನಿಮಾಗೆ ಕರ್ನಾಟಕದಲ್ಲಿ ಅದ್ದೂರಿಯಾಗಿ ಪ್ರೀ-ರಿಲೀಸ್ ಇವೆಂಟ್ (RRR Movie Pre-release Event) ಮಾಡಲು ತೀರ್ಮಾನಿಸಲಾಗಿದೆ. ಅದಕ್ಕಾಗಿ ಚಿಕ್ಕಬಳ್ಳಾಪುರದ ಅಗಲಗುರ್ಕಿಯಲ್ಲಿ ಬೃಹತ್ ವೇದಿಕೆ ಸಿದ್ಧವಾಗುತ್ತಿದೆ. ಶನಿವಾರ (ಮಾ.19) ಈ ಕಾರ್ಯಕ್ರಮ ನಡೆಯಲಿದ್ದು ಈಗಾಗಲೇ ಕೌಂಟ್ಡೌನ್ ಶುರುವಾಗಿದೆ. ಅಕ್ಕ-ಪಕ್ಕದ ರಾಜ್ಯಗಳಿಂದಲೂ ಅಭಿಮಾನಿಗಳು ಆಗಮಿಸಲಿದ್ದು, 100 ಎಕರೆ ಜಾಗದಲ್ಲಿ ಈ ಇವೆಂಟ್ ನಡೆಯಲಿದೆ. ಬೃಹತ್ ಎಲ್ಇಡಿ ಪರದೆಗಳನ್ನು ಅಳವಡಿಸಲಾಗುತ್ತಿದೆ. ನಿರ್ದೇಶಕ ರಾಜಮೌಳಿ (Rajamouli), ನಟರಾದ ರಾಮ್ ಚರಣ್, ಜ್ಯೂ. ಎನ್ಟಿಆರ್, ನಟಿ ಆಲಿಯಾ ಭಟ್ ಮುಂತಾದವರು ಈ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಟ ಶಿವರಾಜ್ಕುಮಾರ್ ಕೂಡ ಪಾಲ್ಗೊಳ್ಳಲಿದ್ದಾರೆ. ಕರ್ನಾಟಕದಲ್ಲಿ ಕೆವಿಎನ್ ಪ್ರೊಡಕ್ಷನ್ ಸಂಸ್ಥೆಯು ‘ಆರ್ಆರ್ಆರ್’ ಸಿನಿಮಾದ ವಿತರಣೆ ಜವಾಬ್ದಾರಿಯನ್ನು ವಹಿಸಿಕೊಂಡಿದೆ.
ಇದನ್ನೂ ಓದಿ:
‘ಆರ್ಆರ್ಆರ್’ ನಿರ್ಮಾಪಕನ ಖಾತೆಯಿಂದ ಪ್ರಭಾಸ್ಗೆ ವರ್ಗಾವಣೆ ಆಯ್ತು 50 ಕೋಟಿ ರೂಪಾಯಿ?
100 ಎಕರೆ ಜಾಗದಲ್ಲಿ RRR ಪ್ರೀ-ರಿಲೀಸ್ ಇವೆಂಟ್ಗೆ ಸಿದ್ಧತೆ; ಅತಿಥಿಯಾಗಿ ಬರ್ತಾರೆ ಸಿಎಂ ಬೊಮ್ಮಾಯಿ, ಶಿವಣ್ಣ
ಸಮಯ ಪ್ರಜ್ಞೆ ಇಲ್ವೇನ್ರೀ: ಯತೀಂದ್ರ ಬಗ್ಗೆ ತನ್ವೀರ್ ಸೇಠ್ ಬಹಿರಂಗ ಅಸಮಾಧಾನ
ಬೆಂಗಳೂರಿನಲ್ಲಿ ಆನೆ ದಾಳಿಗೆ ವಾಕಿಂಗ್ಗೆ ತೆರಳಿದ್ದ ವೃದ್ಧ ಬಲಿ!
ಸಖತ್ ಆಗವ್ರೆ ಅಂತ ಕಾಳು ಹಾಕೋಕೆ ಬಂದ ಯಶಸ್ಗೆ ಮರೆಯಲಾರದ ಪಾಠ ಕಲಿಸಿದ ಗಾನವಿ
ರಸ್ತೆ ಪರಿಶೀಲನೆ ವೇಳೆ ವ್ಯಕ್ತಿಗೆ ಕಪಾಳಮೋಕ್ಷ ಮಾಡಿದ ದೆಹಲಿ ಸಚಿವ ಪರ್ವೇಶ್

