ದಿನಗೂಲಿ ಕಾರ್ಮಿಕನ ಬ್ಯಾಂಕ್ ಖಾತೆಯಲ್ಲಿ ಜಮಾಯಾಯ್ತು 200 ಕೋಟಿ ರೂಪಾಯಿ.. ಎಚ್ಚೆತ್ತ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ
ಉತ್ತರ ಪ್ರದೇಶದ ದಿನಗೂಲಿ ಕಾರ್ಮಿಕರೊಬ್ಬರ ಬ್ಯಾಂಕ್ ಖಾತೆಯಲ್ಲಿ ಸುಮಾರು 200 ಕೋಟಿ ರೂಪಾಯಿ ಠೇವಣಿ ಇಟ್ಟಿರುವುದು ಸಂಚಲನ ಮೂಡಿಸಿದೆ. ಇದಕ್ಕೆ ಪೂರಕವಾಗಿ ಆದಾಯ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ನೋಟಿಸ್ ನೀಡಿದೆ. ಬಸ್ತಿ ಜಿಲ್ಲೆಯ ಬಟಾನಿಯಾ ಗ್ರಾಮದ ನಿವಾಸಿ ಶಿವಪ್ರಸಾದ್, ದೆಹಲಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದಾರೆ.
ಉತ್ತರ ಪ್ರದೇಶದ ದಿನಗೂಲಿ ಕಾರ್ಮಿಕರೊಬ್ಬರ ಬ್ಯಾಂಕ್ ಖಾತೆಯಲ್ಲಿ (Daily Worker in Delhi) ಸುಮಾರು 200 ಕೋಟಿ ರೂಪಾಯಿ ಠೇವಣಿ ಇಟ್ಟಿರುವುದು ಸಂಚಲನ ಮೂಡಿಸಿದೆ. ಇದಕ್ಕೆ ಪೂರಕವಾಗಿ ಆದಾಯ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಇಲಾಖೆ ನೋಟಿಸ್ (Income Tax department notice) ನೀಡಿದೆ. ಬಸ್ತಿ ಜಿಲ್ಲೆಯ ಬಟಾನಿಯಾ ಗ್ರಾಮದ ನಿವಾಸಿ ಶಿವಪ್ರಸಾದ್, ದೆಹಲಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಅವರ ಖಾತೆಗೆ ಭಾರಿ ಮೊತ್ತ ಜಮೆಯಾದಾಗ ಸ್ವತಃ ಅವರಿಗೂ ಸೇರಿದಂತೆ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಇದಲ್ಲದೆ, ಆದಾಯ ತೆರಿಗೆ ಅಡಿಯಲ್ಲಿ ರೂ. 4.58 ಲಕ್ಷ ಕಡಿತಗೊಳಿಸಲಾಗಿದೆ ಎಂಬ ಮಾಹಿತಿಯೂ ಇದೆ. ದಾಖಲಾರ್ಹ ಸಂಗತಿಯೆಂದರೆ 2019 ರಲ್ಲಿ ತನ್ನ ಪ್ಯಾನ್ ಕಾರ್ಡ್ (Pan Card) ಕಳೆದುಕೊಂಡಿರುವುದಾಗಿ ಆತ ತಿಳಿಸಿದ್ದಾನೆ. ಈ ಕಾರ್ಡ್ ಸಹಾಯದಿಂದ ಯಾರೋ ತಮ್ಮ ವೈಯಕ್ತಿಕ ಬ್ಯಾಂಕ್ ಖಾತೆ ತೆರೆದು ಅಕ್ರಮ ವಹಿವಾಟು ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ತಾವು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿರುವುದಾಗಿ ದಿನಗೂಲಿ ಕಾರ್ಮಿಕ ಶಿವಪ್ರಸಾದ್ ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆದಾಯ ತೆರಿಗೆ ಇಲಾಖೆಯೂ ದಾಖಲೆಗಳನ್ನು ತಡಕಾಡುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ