ಕಾರಿ ಡ್ಯಾಶ್ ಬೋರ್ಡ್ ನಲ್ಲಿದ್ದ ಲಕ್ಷ ಲಕ್ಷ ಹಣ 5 ನಿಮಿಷದೊಳಗೆ ಎಸ್ಕೇಪ್, ವಿಡಿಯೋ ನೋಡಿ
ಬ್ಯಾಂಕ್ನಿಂದ ಡ್ರಾ ಮಾಡಿಕೊಂಡು ತಂದಿದ್ದ ಹಣವನ್ನು ಐದೇ ನಿಮಿಷದಲ್ಲಿ ದುಷ್ಕರ್ಮಿಗಳು ಲೂಟಿ ಮಾಡಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ವೆಂಕಟೇಶ್ವರಯ್ಯ ಲೇಔಟ್ ನಲ್ಲಿ ನಡೆದಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬೆಂಗಳೂರು, (ಆಗಸ್ಟ್ 18): ಕಾರಿನ ಗ್ಲಾಸ್ ಒಡೆದು ಡ್ಯಾಶ್ ಬೋರ್ಡ್ ನಲ್ಲಿದ್ದ ಹಣ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ವೆಂಕಟೇಶ್ವರಯ್ಯ ಲೇಔಟ್ ನಲ್ಲಿ ನಡೆದಿದೆ. ವೆಂಕಟೇಶ್ ಎನ್ನುವರು ಕರ್ನಾಟಕ ಬ್ಯಾಂಕ್ ನಿಂದ ಮೂರು ಲಕ್ಷ ಹಣ ಡ್ರಾ ಮಾಡಿ ತಂದಿದ್ದರು. ಆದ್ರೆ, ವೆಂಕಟೇಶ್ ಮನೆಯೊಳಗೆ ಹೋಗಿ ಬರುವ ಐದು ನಿಮಿಷದೊಳಗೆ ದುರ್ಷ್ಕರ್ಮಿಗಳು ಕಾರಿನ ಗ್ಲಾಸ್ ಹೊಡೆದು ಡ್ಯಾಶ್ ಬೋರ್ಡ್ನಲ್ಲಿಟ್ಟಿದ್ದ ಹಣವನ್ನು ಎಗರಿಸಿಕೊಂಡು ಹೋಗಿದ್ದಾರೆ. ಆರೋಪಿಗಳ ಸಂಪೂರ್ಣ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow Us
Latest Videos
ಮುಖ್ಯರಸ್ತೆಗೆ ವೈದ್ಯಕೀಯ ತ್ಯಾಜ್ಯ ಸುರಿದ ಕ್ಲಿನಿಕ್ಗೆ 15 ಸಾವಿರ ರೂ.ದಂಡ
ಹನಿಟ್ರ್ಯಾಪ್ ವಿಡಿಯೋ ಭೀತಿ: ಮಾಧ್ಯಮಗಳ ವಿರುದ್ಧ ಮಾಜಿ ಸಿಎಂ ನಿರ್ಬಂಧಕಾಜ್ಞೆ
ಚಿತ್ರದುರ್ಗಕ್ಕೆ ಸುದೀಪ್ ಭೇಟಿ: ಚಪ್ಪಲಿ ಧರಿಸದೇ ನಡೆದುಬಂದ ನಟ
ಸೌಜನ್ಯ ಪ್ರಕರಣ ಮರು ತನಿಖೆ ಬಗ್ಗೆ ಎಸ್ಐಟಿಯಿಂದ ಹೈವೋಲ್ಟೇಜ್ ಸಭೆ

