ಕಾರಿ ಡ್ಯಾಶ್ ಬೋರ್ಡ್ ನಲ್ಲಿದ್ದ ಲಕ್ಷ ಲಕ್ಷ ಹಣ 5 ನಿಮಿಷದೊಳಗೆ ಎಸ್ಕೇಪ್, ವಿಡಿಯೋ ನೋಡಿ

Edited By:

Updated on: Aug 18, 2024 | 2:23 PM

ಬ್ಯಾಂಕ್​ನಿಂದ ಡ್ರಾ ಮಾಡಿಕೊಂಡು ತಂದಿದ್ದ ಹಣವನ್ನು ಐದೇ ನಿಮಿಷದಲ್ಲಿ ದುಷ್ಕರ್ಮಿಗಳು ಲೂಟಿ ಮಾಡಿದ್ದಾರೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ವೆಂಕಟೇಶ್ವರಯ್ಯ ಲೇಔಟ್ ನಲ್ಲಿ ನಡೆದಿದೆ. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಬೆಂಗಳೂರು, (ಆಗಸ್ಟ್​ 18): ಕಾರಿನ ಗ್ಲಾಸ್ ಒಡೆದು ಡ್ಯಾಶ್ ಬೋರ್ಡ್ ನಲ್ಲಿದ್ದ ಹಣ ಕಳ್ಳತನ ಮಾಡಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ವೆಂಕಟೇಶ್ವರಯ್ಯ ಲೇಔಟ್ ನಲ್ಲಿ ನಡೆದಿದೆ. ವೆಂಕಟೇಶ್ ಎನ್ನುವರು ಕರ್ನಾಟಕ ಬ್ಯಾಂಕ್ ನಿಂದ ಮೂರು ಲಕ್ಷ ಹಣ ಡ್ರಾ ಮಾಡಿ ತಂದಿದ್ದರು. ಆದ್ರೆ, ವೆಂಕಟೇಶ್​ ಮನೆಯೊಳಗೆ ಹೋಗಿ ಬರುವ ಐದು ನಿಮಿಷದೊಳಗೆ ದುರ್ಷ್ಕರ್ಮಿಗಳು ಕಾರಿನ ಗ್ಲಾಸ್​ ಹೊಡೆದು ಡ್ಯಾಶ್ ಬೋರ್ಡ್​​ನಲ್ಲಿಟ್ಟಿದ್ದ​ ಹಣವನ್ನು ಎಗರಿಸಿಕೊಂಡು ಹೋಗಿದ್ದಾರೆ. ಆರೋಪಿಗಳ ಸಂಪೂರ್ಣ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಬಗ್ಗೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Loading...
Unable to load recommendations.
Follow Us
ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More