ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟ ವಾಪಸ್: 3,600 ದರಕ್ಕೆ ತೃಪ್ತಿಪಟ್ಟ ರೈತರು

Edited By:

Updated on: Nov 05, 2026 | 9:19 PM

ಕಳೆದ 12 ದಿನಗಳಿಂದ ನಿರಂತರವಾಗಿ ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿದ್ದ ಕಬ್ಬು ಬೆಳೆಗಾರರ ಬೃಹತ್ ಹೋರಾಟ ಕೊನೆಗೂ ಅಂತ್ಯಗೊಂಡಿದೆ. ಪ್ರತಿ ಟನ್ ಕಬ್ಬಿಗೆ 5,500 ನಿಗದಿ ಮಾಡಬೇಕೆಂದು ಪಟ್ಟು ಹಿಡಿದಿದ್ದ ರೈತರು, ಸರ್ಕಾರ ಹಾಗೂ ಕಾರ್ಖಾನೆಗಳ ಆಡಳಿತ ಮಂಡಳಿ ನಿಗದಿಪಡಿಸಿದ 3,600 ಬೆಲೆಗೆ ತೃಪ್ತಿಗೊಂಡು ಗುರುವಾರ ಸಂಜೆ ಗುರ್ಲಾಪುರದ ಪ್ರತಿಭಟನೆಯನ್ನು ವಾಪಸ್ ಪಡೆದುಕೊಂಡಿದ್ದಾರೆ.

ಬೆಳಗಾವಿ (ನವೆಂಬರ್ 05): ಕಳೆದ 12 ದಿನಗಳಿಂದ ನಿರಂತರವಾಗಿ ಬೆಳಗಾವಿ ಜಿಲ್ಲೆಯಲ್ಲಿ ನಡೆಯುತ್ತಿದ್ದ ಕಬ್ಬು ಬೆಳೆಗಾರರ ಬೃಹತ್ ಹೋರಾಟ ಕೊನೆಗೂ ಅಂತ್ಯಗೊಂಡಿದೆ. ಪ್ರತಿ ಟನ್ ಕಬ್ಬಿಗೆ 5,500 ನಿಗದಿ ಮಾಡಬೇಕೆಂದು ಪಟ್ಟು ಹಿಡಿದಿದ್ದ ರೈತರು, ಸರ್ಕಾರ ಹಾಗೂ ಕಾರ್ಖಾನೆಗಳ ಆಡಳಿತ ಮಂಡಳಿ ನಿಗದಿಪಡಿಸಿದ 3,600 ಬೆಲೆಗೆ ತೃಪ್ತಿಗೊಂಡು ಗುರುವಾರ ಸಂಜೆ ಗುರ್ಲಾಪುರದ ಪ್ರತಿಭಟನೆಯನ್ನು ವಾಪಸ್ ಪಡೆದುಕೊಂಡಿದ್ದಾರೆ.

ಇನ್ನು ಈ ಬಗ್ಗೆ ಟಿವಿ9 ಜೊತೆ ಮಾತನಾಡಿರುವ ರೈತ ಮುಖಂಡ ಚೂನಪ್ಪ ಪೂಜಾರಿ, ಗುರ್ಲಾಪುರದಲ್ಲಿ ಕೂಡ ಹೋರಾಟ ಹಿಂಪಡೆದಿದ್ದು, ಸಕ್ಕರೆ ಕಾರ್ಖಾನೆಗಳು ನಾಳೆಯಿಂದ (ನವೆಂಬರ್ 6) ಆರಂಭ ಆಗುತ್ತವೆ. ಹೀಗಾಗಿ ಯಾರು ಕೂಡ ಕಾರ್ಖಾನೆ ಆರಂಭಕ್ಕೆ ಅಡ್ಡಿ ಮಾಡಬೇಡಿ. ಶುಕ್ರವಾರ ಗುರ್ಲಾಪುರದಲ್ಲಿ ಎಲ್ಲ ರೈತರು ಸೇರಿ ಸಭೆ ಮಾಡ್ತೇವೆ. ನಾವು 3,800 ರೂಪಾಯಿ ಕೊಡಿ ಎಂದು ಕೇಳಿದ್ವಿ. ಸಚಿವ ಸತೀಶ್ ಜಾರಕಿಹೊಳಿ‌ ಅವರು ಮಧ್ಯಸ್ಥಿಕೆ ವಹಿಸಿ 3,600 ದರ ನಿಗದಿ ಮಾಡಿಸಿದ್ದಾರೆ. ದರ ನಿಗದಿ ನಮಗೆ ತೃಪ್ತಿ ತಂದಿದೆ. ಸಕ್ಕರೆ ಮಾರಾಟದ ಮೇಲೂ ನಮಗೆ ಲಾಂಭಾಂಶ ಬರಲಿದೆ. ಮೊದಲ ಹಂತದಲ್ಲಿ ನಮಗೆ ಜಯ ಸಿಕ್ಕಿದೆ. ಆದ್ರೆ, ಸರ್ಕಾರ 1 ಸಾವಿರ ಪ್ರೋತ್ಸಾಹ ಧನ ನೀಡುವವರೆಗೂ ಹೋರಾಟ ಮಾಡುತ್ತೇವೆ. ಮುಖ್ಯಮಂತ್ರಿಗಳು ಒಂದು ಸಾವಿರ ಹಣ ಘೋಷಣೆ ಮಾಡಬೇಕು. ಇಲ್ಲವಾದ್ರೆ ಅಧಿವೇಶನ ನಡೆಸಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More