Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ 4 ಲಕ್ಷ ರೂ. ಮೌಲ್ಯದ ಗಾಂಜಾ ಪತ್ತೆ

ಹುಬ್ಬಳ್ಳಿ ರೈಲ್ವೆ ನಿಲ್ದಾಣದಲ್ಲಿ 4 ಲಕ್ಷ ರೂ. ಮೌಲ್ಯದ ಗಾಂಜಾ ಪತ್ತೆ

ಶಿವಕುಮಾರ್ ಪತ್ತಾರ್. ಹುಬ್ಬಳ್ಳಿ
| Updated By: ವಿವೇಕ ಬಿರಾದಾರ

Updated on: Feb 23, 2025 | 1:30 PM

ಹುಬ್ಬಳ್ಳಿಯ ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ 4ನೇ ಪ್ಲಾಟ್​ಫಾರ್ಮ್​ನಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ ಪತ್ತೆಯಾಗಿದೆ. ವಾರಸುದಾರರಿಲ್ಲದ ಬ್ಯಾಗ್​ವೊಂದರಲ್ಲಿ 4 ಕೆಜಿ ಗಾಂಜಾ ಪತ್ತೆಯಾಗಿದ್ದು, ಅಬಕಾರಿ ಉಪನಿರೀಕ್ಷಕ ಐ.ಡಿ.ಕಿತ್ತೂರು ಗಾಂಜಾ ಜಪ್ತಿ ಮಾಡಿದ್ದಾರೆ. ರೈಲಿನ ಮೂಲಕ ಹುಬ್ಬಳ್ಳಿಗೆ ಗಾಂಜಾ ತಂದಿರುವ ಶಂಕೆ ವ್ಯಕ್ತವಾಗಿದೆ.

ಹುಬ್ಬಳ್ಳಿ, ಫೆಬ್ರವರಿ 23: ಶ್ರೀ ಸಿದ್ಧಾರೂಢ ಸ್ವಾಮಿ ರೈಲು ನಿಲ್ದಾಣದ (Hubballi Railway Station) 4ನೇ ಪ್ಲಾಟ್​ಫಾರ್ಮ್​ನಲ್ಲಿ 4 ಲಕ್ಷ ರೂಪಾಯಿ ಮೌಲ್ಯದ 4 ಕೆಜಿ ಗಾಂಜಾ (Ganja) ಪತ್ತೆಯಾಗಿದೆ. ವಾರಸುದಾರರಿಲ್ಲದ ಬ್ಯಾಗ್​ವೊಂದರಲ್ಲಿ 4 ಕೆಜಿ ಗಾಂಜಾ ಪತ್ತೆಯಾಗಿದ್ದು, ಅಬಕಾರಿ ಉಪನಿರೀಕ್ಷಕ ಐ.ಡಿ.ಕಿತ್ತೂರು ಗಾಂಜಾ ಜಪ್ತಿ ಮಾಡಿದ್ದಾರೆ. ರೈಲಿನ ಮೂಲಕ ಹುಬ್ಬಳ್ಳಿಗೆ ಗಾಂಜಾ ತಂದಿರುವ ಶಂಕೆ ವ್ಯಕ್ತವಾಗಿದೆ. ಗಾಂಜಾ ತಂದಿದ್ದ ಅಪರಿಚಿತ ವ್ಯಕ್ತಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಹುಬ್ಬಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.