ಕೇಂದ್ರದ ಎನ್ ಪಿ ಎಸ್ ಅಡಿ ಸಂಗ್ರಹವಾದ ರೂ. 65,000 ಕೋಟಿ ಹಣ ಅದಾನಿಯ ಪಾಲಾಗಿದೆ: ಎಮ್ ಲಕ್ಷ್ಮಣ್, ಕೆಪಿಸಿಸಿ ವಕ್ತಾರ

ಅರುಣ್​ ಕುಮಾರ್​ ಬೆಳ್ಳಿ

Updated on: Feb 18, 2023 | 5:20 PM

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಅಲ್ಲಿ ಎನ್ ಪಿ ಎಸ್ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರಲಾಗಿದೆ ಎಂದು ಹೇಳಿದರು.

ಮೈಸೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ವಕ್ತಾರ ಎಮ ಲಕ್ಷ್ಮಣ್ (M Lakshman) ಅವರು ಸುದ್ದ್ದಿಗೋಷ್ಟಿ ನಡೆಸಿದಾಗೆಲ್ಲ ಹೊಸ ಹೊಸ ವಿಷಯಗಳನ್ನು, ಸರ್ಕಾರದ ಹಗರಣಗಳನ್ನು ಜನರ ಗಮನಕ್ಕೆ ತರುತ್ತಾರೆ. ಶನಿವಾರ ನಗರದಲ್ಲಿ ಮಾತಾಡಿದ ಅವರು, ಕೇಂದ್ರ ಸರ್ಕಾರ ಜಾರಿಗೊಳಿಸಿದ ಹೊಸ ಪಿಂಚಣಿ ಯೋಜನೆಯಡಿ (NPS) ಕರ್ನಾಟಕದ ಸರ್ಕಾರೀ ನೌಕರರಿಂದ ರೂ. 65,000 ಕೋಟಿ ಸಂಗ್ರಹವಾಗಿದೆ. ಆದರೆ ಆ ಹಣ ಎಲ್ಲಿ ಹೋಯಿತು ಅಂತ ಯಾರಿಗೂ ಗೊತ್ತಿಲ್ಲ. ನಿಸ್ಸಂದೇಹವಾಗಿ ಅದು ಗೌತಮ್ ಅದಾನಿ (Gautam Adani) ಹುಂಡಿ ಸೇರಿರುತ್ತದೆ ಎಂದು ಲಕ್ಷ್ಮಣ್ ಹೇಳಿದರು. ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಅಲ್ಲಿ ಎನ್ ಪಿ ಎಸ್ ರದ್ದು ಮಾಡಿ ಹಳೆ ಪಿಂಚಣಿ ಯೋಜನೆ ಜಾರಿಗೆ  ತರಲಾಗಿದೆ ಎಂದು ಹೇಳಿದರು.

ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.