ಆರ್ಎಸ್ಎಸ್ ಚಟುವಟಿಕೆ ನಿರ್ಬಂಧ: ನಿಜಕ್ಕೂ ಸರ್ಕಾರದ ಆದೇಶದಲ್ಲಿ ಏನಿತ್ತು? ಇಲ್ಲಿದೆ ನೋಡಿ
ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದ ಸಭೆ-ಸಮಾರಂಭಗಳ ನಿರ್ಬಂಧದ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ. 10 ಜನರಿಗಿಂತ ಹೆಚ್ಚು ಮಂದಿ ಸೇರುವುದಕ್ಕೆ ಅನುಮತಿ ಕಡ್ಡಾಯಗೊಳಿಸಿದ್ದ ಆದೇಶ ಮೂಲಭೂತ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ. ಇದನ್ನು, ಆರ್ಎಸ್ಎಸ್ ಚಟುವಟಿಕೆ ನಿರ್ಬಂಧಿಸುವ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಆದ ದೊಡ್ಡ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ.
ಬೆಂಗಳೂರು, ಅಕ್ಟೋಬರ್ 28: ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಸರ್ಕಾರಿ ಜಾಗಗಳಲ್ಲಿ ಏನೇ ಚಟುವಟಿಕೆಗಳು ಅಥವಾ ಪಥಸಂಚಲನ ಮಾಡುವುದಿದ್ದರೆ ಸರ್ಕಾರದಿಂದ ಅನುಮತಿ ಪಡೆದೇ ಮಾಡಬೇಕು ಎಂದು ಕರ್ನಾಟಕ ಸರ್ಕಾರ ಅಕ್ಟೋಬರ್ 18 ರಂದು ಹೊರಡಿಸಿದ್ದ ಆದೇಶಕ್ಕೆ ಮಂಗಳವಾರ ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ. ಇದನ್ನು, ಆರ್ಎಸ್ಎಸ್ ಚಟುವಟುಕೆ ನಿರ್ಬಂಧಿಸುವ ಸರ್ಕಾರದ ನಿರ್ಧಾರಕ್ಕೆ ಆದ ಹಿನ್ನಡೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಹಾಗಾದರೆ, ಸರ್ಕಾರದ ಆದೇಶದಲ್ಲೇನಿತ್ತು? ಇದಕ್ಕೆ ಹೈಕೋರ್ಟ್ ಹೇಳಿದ್ದೇನು? ಈ ವಿಡಿಯೋದಲ್ಲಿದೆ ಮಾಹಿತಿ.
ಇದನ್ನೂ ಓದಿ: RSS ಚಟುವಟಿಕೆ ನಿರ್ಬಂಧಿಸಲು ಮುಂದಾಗಿದ್ದ ಕಾಂಗ್ರೆಸ್ ಸರ್ಕಾರಕ್ಕೆ ಹಿನ್ನಡೆ: ಆದೇಶಕ್ಕೆ ಮಧ್ಯಂತರ ತಡೆ ನೀಡಿದ ಹೈಕೋರ್ಟ್
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Oct 28, 2025 02:00 PM
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

