AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಸಿದ್ದರಾಮಯ್ಯಗೆ ಜೋಶಿ ತಿರುಗೇಟು

RSS, ಬಿಜೆಪಿ ಹಿಂದೂ ರಾಷ್ಟ್ರ ಮಾಡಲು ಹೊರಟಿಲ್ಲ, ಈಗಾಗಲೇ ಇದೆ: ಸಿದ್ದರಾಮಯ್ಯಗೆ ಜೋಶಿ ತಿರುಗೇಟು

ಸಂಜಯ್ಯಾ ಚಿಕ್ಕಮಠ
| Edited By: |

Updated on: Jun 21, 2026 | 9:53 PM

Share

ಸಿದ್ದರಾಮಯ್ಯನವರ ಹಿಂದೂ ರಾಷ್ಟ್ರ ಹೇಳಿಕೆಗೆ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಆರ್‌ಎಸ್‌ಎಸ್‌ ಮತ್ತು ಬಿಜೆಪಿ ಹಿಂದೂ ರಾಷ್ಟ್ರವನ್ನು ನಿರ್ಮಿಸಲು ಹೊರಟಿಲ್ಲ. ಭಾರತ ಈಗಾಗಲೇ ಹಿಂದೂ ರಾಷ್ಟ್ರವಾಗಿದೆ. ಪ್ರಜಾಪ್ರಭುತ್ವ ಇರುವ ಈ ದೇಶದಲ್ಲಿ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ ಎಂದು ಹೇಳಿದ್ದಾರೆ. ಹಿಂದೂ ಬಹುಸಂಖ್ಯಾತತನ ಕಳೆದುಕೊಂಡರೆ ಪ್ರಜಾಪ್ರಭುತ್ವ ಉಳಿಯುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ಹುಬ್ಬಳ್ಳಿ, ಜೂನ್​ 21: ಆರ್‌ಎಸ್‌ಎಸ್‌ ಮತ್ತು ಬಿಜೆಪಿ ದೇಶವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡಲು ಹೊರಟಿವೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವ ಪ್ರಲ್ಹಾದ್​ ಜೋಶಿ ಕಿಡಿಕಾರಿದ್ದಾರೆ. ಆರ್‌ಎಸ್‌ಎಸ್‌, ಬಿಜೆಪಿ ಹಿಂದೂ ರಾಷ್ಟ್ರವನ್ನು ಮಾಡಲು ಹೊರಟಿಲ್ಲ. ಈ ದೇಶ ಹಿಂದೂ ರಾಷ್ಟ್ರನೇ ಇದೆ. ಸಿದ್ದರಾಮಯ್ಯನವರಿಗೆ ಇದು ಗೊತ್ತಿಲ್ಲ ಎಂದಿದ್ದಾರೆ. ಈ ದೇಶ ಹಿಂದೂ ರಾಷ್ಟ್ರ ಇಲ್ಲ ಎಂದು ಅಂದಿದ್ದರೆ, ಈ ದೇಶದಲ್ಲಿ ಪ್ರಜಾಪ್ರಭುತ್ವ ಇರುತ್ತಿರಲಿಲ್ಲ. ಪಾಕಿಸ್ತಾನ ಮತ್ತು ಬಾಂಗ್ಲಾದೇಶಗಳ ಉದಾಹರಣೆ ನೀಡಿದ ಅವರು, ಹಿಂದೂ ಬಹುಸಂಖ್ಯಾ ಕಳೆದುಕೊಂಡರೆ ದೇಶದಲ್ಲಿ ಪ್ರಜಾಪ್ರಭುತ್ವವೂ ಇರುವುದಿಲ್ಲ, ಮತದಾನವೂ ಇರುವುದಿಲ್ಲ. ತಮ್ಮ ಮಗನಿಗೆ ಮಂತ್ರಿ ಮಾಡಿದ್ದರೂ, ಇದನ್ನು ಹೇಳ್ಕೊಂಡು ರಾಜಕಾರಣ ಮಾಡುವುದನ್ನು ನಿಲ್ಲಿಸಿ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us