RSSನ ಯಾರೂ ಬ್ಯಾನ್ ಮಾಡೋಕೆ ಆಗಲ್ಲ: ಅಚ್ಚರಿಯ ಹೇಳಿಕೆ ಕೊಟ್ಟ ಸಚಿವ ಸತೀಶ್ ಜಾರಕಿಹೊಳಿ
ಸಚಿವ ಸತೀಶ್ ಜಾರಕಿಹೊಳಿ ಅವರು ಆರ್ಎಸ್ಎಸ್ ನಿಷೇಧದ ಕುರಿತು ಅನಂತ್ ಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿದ್ದಾರೆ. ಆರ್ಎಸ್ಎಸ್ ಅನ್ನು ನಿಷೇಧಿಸುವುದು ಅಸಾಧ್ಯ ಎಂದು ಜಾರಕಿಹೊಳಿ ಹೇಳಿದ್ದಾರೆ. ಸಂಘಟನೆ ನಿಷೇಧಕ್ಕೂ ಮತ್ತು ಚಟುವಟಿಕೆ ನಿರ್ಬಂಧಕ್ಕೂ ವ್ಯತ್ಯಾಸವಿದೆ ಎಂದು ಇದೇ ವೇಳೆ ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, ಮಾರ್ಚ್ 09: ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಹೆಗಡೆ ಅವರ ಆರ್ಎಸ್ಎಸ್ ನಿಷೇಧದ ಕುರಿತ ಹೇಳಿಕೆಗೆ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ. ಆರ್ಎಸ್ಎಸ್ ಅನ್ನು ಯಾರೂ ಬ್ಯಾನ್ ಮಾಡಿಲ್ಲ, ಯಾರೂ ಬ್ಯಾನ್ ಮಾಡೋಕೆ ಆಗಲ್ಲ ಎಂದು ಅವರು ಹೇಳಿದ್ದಾರೆ. ಪ್ರಿಯಾಂಕ್ ಖರ್ಗೆ ಆರ್ಎಸ್ಎಸ್ ಚಟುವಟಿಕೆಗಳನ್ನು ನಿರ್ಬಂಧಿಸುವ ಬಗ್ಗೆ ಪ್ರಸ್ತಾಪಿಸಿದ್ದನ್ನು ಉಲ್ಲೇಖಿಸಿದ ಅವರು, ಸಂಘಟನೆ ನಿಷೇಧಕ್ಕೂ ಮತ್ತು ಚಟುವಟಿಕೆ ನಿರ್ಬಂಧಕ್ಕೂ ವ್ಯತ್ಯಾಸವಿದೆ ಎಂದು ಸ್ಪಷ್ಟಪಡಿಸಿದ್ದಾರೆ. ನಮ್ಮ ಸರ್ಕಾರವಾಗಲೀ ಅಥವಾ ಯಾವುದೇ ಸರ್ಕಾರವಾಗಲೀ ಆರ್ಎಸ್ಎಸ್ ಅನ್ನು ನಿಷೇಧಿಸುವ ಬಗ್ಗೆ ಎಲ್ಲೂ ಹೇಳಿಲ್ಲ. ಇದು ಅನಗತ್ಯ ಚರ್ಚೆ ಎಂದು ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Mar 09, 2026 12:33 PM
Loading...
Unable to load recommendations.
Follow Us
