‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರ ನೋಡಿ RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು? ಇಲ್ಲಿದೆ ವಿಡಿಯೋ
RSS Chief Mohan Bhagwat: ಆರ್ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾ ತೋರಿಸಿಲಾಗಿದೆ. ಚಿತ್ರವನ್ನು ನೋಡಿದ ಬಳಿಕ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.
ಐತಿಹಾಸಿಕ ಕಥಾಹಂದರ ಹೊಂದಿರುವ ‘ಸಾಮ್ರಾಟ್ ಪೃಥ್ವಿರಾಜ್’ ಸಿನಿಮಾ (Samrat Prithviraj) ಜೂನ್ 3ರಂದು ಬಿಡುಗಡೆ ಆಗಿದೆ. ಅಕ್ಷಯ್ ಕುಮಾರ್ ನಟನೆಯ ಈ ಚಿತ್ರಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಅದರ ನಡುವೆ ಅನೇಕ ರಾಜಕಾರಣಿಗಳು ಸಿನಿಮಾ ನೋಡಿ ಹೊಗಳಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಈ ಚಿತ್ರವನ್ನು ಕೊಂಡಾಡಿದ್ದಾರೆ. ಅಕ್ಷಯ್ ಕುಮಾರ್ ಮತ್ತು ಅವರ ತಂಡದವರು ಆರ್ಎಸ್ಎಸ್ (RSS) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೂ ಸಿನಿಮಾ ತೋರಿಸಿದ್ದಾರೆ. ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರವನ್ನು ನೋಡಿದ ಬಳಿಕ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ಪೃಥ್ವಿರಾಜ್ ಕುರಿತು ಬೇರೆ ಯಾರೋ ಬರೆದ ಇತಿಹಾಸವನ್ನು ನಾವು ಈ ಹಿಂದೆ ಓದಿದ್ದೆವು. ಆದರೆ ಭಾರತ ಬರೆದ ಇತಿಹಾಸವನ್ನು ನಾವು ಇದೇ ಮೊದಲ ಬಾರಿ ನೋಡುತ್ತಿದ್ದೇವೆ. ನಮ್ಮ ಇತಿಹಾಸವನ್ನು ನಾವು ನಮ್ಮದೇ ದೃಷ್ಟಿಕೋನದಿಂದ ನೋಡಿದರೆ ದೇಶದ ಬೆಳೆವಣಿಗೆ ಮೇಲೆ ಒಳ್ಳೆಯ ಪರಿಣಾಮ ಬೀರುತ್ತದೆ’ ಎಂದು ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.