ಚಿಕ್ಕೋಡಿ ಕಾಡಸಿದ್ದೇಶ್ವರ ಮಠಕ್ಕೆ ಮೋಹನ್ ಭಾಗವತ್​ ಭೇಟಿ: ಶ್ರೀಗಳ ನೇತೃತ್ವದಲ್ಲಿ ತುಲಾಭಾರ

Edited By:

Updated on: Mar 28, 2026 | 2:44 PM

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರು ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಡೂರಿನ ಕಾಡಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದರು. ಅವರು ಪೂಜೆ ಸಲ್ಲಿಸಿ, ಗೋ ತುಲಾಭಾರ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಶ್ರೀಶೈಲ ಜಗದ್ಗುರು ಶ್ರೀಗಳ ನೇತೃತ್ವದಲ್ಲಿ ಗೋವುಗಳಿಗೆ ಮೇವು ಹಾಕಿ ಗೋ ಪೂಜೆ ನೆರವೇರಿಸಿದರು.

ಬೆಳಗಾವಿ, ಮಾರ್ಚ್​ 28: ಜಿಲ್ಲೆಯ ಚಿಕ್ಕೋಡಿ ತಾಲೂಕಿನ‌ ಯಡೂರ ಗ್ರಾಮದ ಕಾಡಸಿದ್ದೇಶ್ವರ ಮಠದಲ್ಲಿ ನಡೆದ ವಿದ್ಯಾರ್ಥಿಗಳ ಯುವ ಸಮಾವೇಶದಲ್ಲಿ ಆರ್​​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್​​ ಭಾಗವಹಿಸಿದ್ದರು. ಬಳಿಕ ಚಿಕ್ಕೋಡಿ ತಾಲೂಕಿನ ಯಡೂರಿನ ಕಾಡಸಿದ್ದೇಶ್ವರ ಮಠದಿಂದ ಮೋಹನ್ ಭಾಗವತ್​​​ರ ತುಲಾಭಾರ ಮಾಡಲಾಗಿದೆ. ಶ್ರೀಶೈಲ ಜಗದ್ಗುರು ಚನ್ನರಾಮಸಿದ್ಧ ಶ್ರೀಗಳ ನೇತೃತ್ವದಲ್ಲಿ ಗೋವುಗಳಿಗೆ ನೀಡುವ ಆಹಾರ ಪದಾರ್ಥಗಳಿಂದ ತುಲಾಭಾರ ಮಾಡಲಾಗಿದೆ. ಬಳಿಕ ಮೋಹನ್ ಭಾಗವತ್ ಗೋವುಗಳಿಗೆ ಮೇವು ಹಾಕಿ ಗೋ ಪೂಜೆ ನೆರವೇರಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More