ಆರೆಸ್ಸೆಸ್ ದೇಶಭಕ್ತರನ್ನು ತಯಾರು ಮಾಡುವ ಕಾರ್ಖಾನೆಯಾಗಿದೆ: ಬಸನಗೌಡ ಪಾಟೀಲ್ ಯತ್ನಾಳ್

| Updated By: ಅರುಣ್​ ಕುಮಾರ್​ ಬೆಳ್ಳಿ

Updated on: Sep 28, 2022 | 2:14 PM

ದೇಶ ವಿರೋಧೀ ಚಟುವಟಿಕೆ, ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗುವ ಇತಿಹಾಸ ಹೊಂದಿರುವ ಪಿಎಫ್ ಐ ಸಂಘಟನೆ ಬ್ಯಾನ್ ಮಾಡಬೇಕೆನ್ನುವುದು ನಮ್ಮೆಲ್ಲರ ಒತ್ತಾಸೆಯಾಗಿತ್ತು, ಕೇಂದ್ರದಿಂದ ಅದಕ್ಕೆ ಮನ್ನಣೆ ಸಿಕ್ಕಿದೆ ಎಂದು ಯತ್ನಾಳ್ ಹೇಳಿದರು.

ವಿಜಯಪುರ: ಮಂಗಳವಾರವಷ್ಟೇ ಪಿಎಫ್ ಐ ಸಂಘಟನೆಯನ್ನು ಬ್ಯಾನ್ ಮಾಡಬೇಕೆಂದು ಹೇಳಿದ್ದ ವಿಜಯಪುರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ಅವರು ಕೇಂದ್ರ ಸರ್ಕಾರ ಹೇರಿರುವ ನಿಷೇಧವನ್ನು ಸ್ವಾಗತಿಸಿದ್ದಾರೆ. ಆರೆಸ್ಸೆಸ್ ಬ್ಯಾನ್ ಮಾಡಬೇಕೆನ್ನುವುದು ಅತಿರೇಕದ ಮಾತು ಯಾಕೆಂದರೆ ಅದು ದೇಶಭಕ್ತರನ್ನು ತಯಾರು ಮಾಡುವ ಕಾರ್ಖಾನೆಯಾಗಿದೆ ಎಂದು ಯತ್ನಾಳ್ ಹೇಳಿದರು. ದೇಶ ವಿರೋಧೀ ಚಟುವಟಿಕೆ, ಭಯೋತ್ಪಾದಕ ಕೃತ್ಯಗಳಲ್ಲಿ ತೊಡಗುವ ಇತಿಹಾಸ ಹೊಂದಿರುವ ಪಿಎಫ್ ಐ ಸಂಘಟನೆ ಬ್ಯಾನ್ ಮಾಡಬೇಕೆನ್ನುವುದು ನಮ್ಮೆಲ್ಲರ ಒತ್ತಾಸೆಯಾಗಿತ್ತು, ಕೇಂದ್ರದಿಂದ ಅದಕ್ಕೆ ಮನ್ನಣೆ ಸಿಕ್ಕಿದೆ ಎಂದು ಯತ್ನಾಳ್ ಹೇಳಿದರು.