AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ

ಆರ್‌ಎಸ್‌ಎಸ್​ನವರು ಹಿಂದುಗಳಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ

ರಾಮ್​, ಮೈಸೂರು
| Edited By: |

Updated on: Jun 16, 2026 | 2:00 PM

Share

ಸಚಿವ ಯತೀಂದ್ರ ಸಿದ್ದರಾಮಯ್ಯ ಆರ್‌ಎಸ್‌ಎಸ್ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ. ಆರ್‌ಎಸ್‌ಎಸ್‌ ಸದಸ್ಯರು ಹಿಂದುಗಳಲ್ಲ, ಬದಲಾಗಿ ಹಿಂದುತ್ವವಾದಿಗಳು ಅಷ್ಟೇ ಎಂದು ಅವರು ಪ್ರತಿಪಾದಿಸಿದ್ದಾರೆ. ಆರ್‌ಎಸ್‌ಎಸ್‌ ಕೇವಲ ಸಾಂಸ್ಕೃತಿಕ ಸಂಘಟನೆ ಅಲ್ಲ, ಬದಲಿಗೆ ಬಿಜೆಪಿಗೆ ಕೆಲಸ ಮಾಡುವ ರಾಜಕೀಯ ಸಂಘಟನೆ ಎಂದಿರುವ ಯತೀಂದ್ರ, ಅದರ ಆರ್ಥಿಕ ವ್ಯವಹಾರಗಳ ಪಾರದರ್ಶಕತೆ ಮತ್ತು ಕಡ್ಡಾಯ ನೋಂದಣಿಯ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ಮೈಸೂರು, ಜೂನ್ 16: ಆರ್‌ಎಸ್‌ಎಸ್‌ ಸದಸ್ಯರು ಹಿಂದುಗಳಲ್ಲ, ಬದಲಿಗೆ ಹಿಂದುತ್ವವಾದಿಗಳು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಧರ್ಮದ ಹೆಸರಿನಲ್ಲಿ ಏನು ಬೇಕಾದರೂ ಮಾಡುವಂತಿಲ್ಲ. ಆರ್‌ಎಸ್‌ಎಸ್‌ ಅನ್ನು ಕೇವಲ ಸಾಂಸ್ಕೃತಿಕ ಸಂಘಟನೆ ಎಂದು ಪರಿಗಣಿಸಲು ಸಾಧ್ಯವಿಲ್ಲ. ಬದಲಾಗಿ, ಇದು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುವ ರಾಜಕೀಯ ಸಂಸ್ಥೆಯಾಗಿದೆ. ಆರ್‌ಎಸ್‌ಎಸ್‌ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಗಳನ್ನು ಮತ್ತು ಹಣಕಾಸು ವ್ಯವಹಾರಗಳನ್ನು ಹೊಂದಿದೆ. ಈ ಆರ್ಥಿಕ ವ್ಯವಹಾರಗಳಿಗೆ ಲೆಕ್ಕಪತ್ರವನ್ನು ನೀಡಬೇಕು. ಎಲ್ಲರಿಗೂ ಒಂದೇ ಕಾನೂನು ಇರಬೇಕು. ಯಾವುದೇ ಸಂಘಟನೆ ತನ್ನನ್ನು ‘ಹಿಂದೂ ಧರ್ಮ’ದ ನೆರಳಲ್ಲಿ ಬಚ್ಚಿಟ್ಟುಕೊಂಡು, ಕಾನೂನಿನಿಂದ ವಿನಾಯಿತಿ ಪಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಗೃಹ ಪ್ರಿಯಾಂಕ್ ಖರ್ಗೆ ಆರ್‌ಎಸ್‌ಎಸ್‌ ನೋಂದಣಿಗೆ ಕೇಳಿರುವುದು ಕಾನೂನು ಪ್ರಕಾರ ಸರಿಯಾಗಿದೆ. ಆರ್‌ಎಸ್‌ಎಸ್‌ ಸಾಂಸ್ಕೃತಿಕ ಸಂಘಟನೆ ಎಂದು ಹೇಳಿಕೊಂಡರೂ, ವಾಸ್ತವದಲ್ಲಿ ಅದೊಂದು ರಾಜಕೀಯ ಸಂಘಟನೆ. ಅದು ಪ್ರತಿಯೊಂದು ಚುನಾವಣೆಯಲ್ಲಿಯೂ ಬಿಜೆಪಿ ಪರವಾಗಿ ಕೆಲಸ ಮಾಡುತ್ತದೆ. ಆದ್ದರಿಂದ, ಆರ್‌ಎಸ್‌ಎಸ್‌ ದೇಶದ ಕಾನೂನುಗಳನ್ನು ಪಾಲಿಸಬೇಕು ಮತ್ತು ತಮ್ಮನ್ನು ನೋಂದಾಯಿಸಿಕೊಳ್ಳಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಒತ್ತಿ ಹೇಳಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ರಾಮ್​, ಮೈಸೂರು
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More