ಅನುಮತಿ ನಿರಾಕರಣೆ ನಡುವೆ RSS ಪಥಸಂಚಲನ: ಸೇಡಂನಲ್ಲಿ ಹೈಡ್ರಾಮಾ; ಕಾರ್ಯಕರ್ತರು ವಶಕ್ಕೆ

Edited By:

Updated on: Oct 19, 2025 | 6:07 PM

ತಹಶೀಲ್ದಾರ್ ಅನುಮತಿ ನಿರಾಕಣೆ ನಡುವೆಯೂ ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ RSS ಪಥಸಂಚಲನ ನಡೆಸಲಾಗಿದೆ. ಆದೇಶಕ್ಕೆ ಸೆಡ್ಡು ಹೊಡೆದು ಪಥಸಂಚಲನದಲ್ಲಿ ಭಾಗಿಯಾದ ಕಾರ್ಯಕರ್ತರನ್ನು ಪೊಲೀಸರು ಪಟ್ಟಣದ ರೈಲ್ವೆ ನಿಲ್ದಾಣದ ಬಳಿ ವಶಕ್ಕೆ ಪಡೆದಿದ್ದಾರೆ. ಈ ವೇಳೆ ಸ್ಥಳದಲ್ಲಿ ಭಾರಿ ಹೈಡ್ರಾಮಾವೇ ನಡೆದಿದೆ.

ಕಲಬುರಗಿ, ಅಕ್ಟೋಬರ್​ 19: ತಹಶೀಲ್ದಾರ್ ಅನುಮತಿ ನಿರಾಕಣೆ ನಡುವೆಯೂ ಪಥಸಂಚಲನ ನಡೆಸುತ್ತಿದ್ದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ನಡೆದಿದೆ. ತಹಶೀಲ್ದಾರ್ ಶ್ರೀಯಾಂಕಾ ಆದೇಶಕ್ಕೆ ಸೆಡ್ಡು ಹೊಡೆದು ಪಥಸಂಚಲನ ನಡೆಸಲಾಗಿದ್ದು, ಸೇಡಂ ಪಟ್ಟಣದ ರೈಲ್ವೆ ನಿಲ್ದಾಣದ ಬಳಿ RSS ಕಾರ್ಯಕರ್ತರನ್ನ ವಶಕ್ಕೆ ಪಡೆಯಲಾಗಿದೆ. ಇಂದು ಸಂಜೆ ಪಥಸಂಚಲನಕ್ಕೆ ಅನುಮತಿ ಕೋರಿ RSS ಮುಖಂಡರು ಸಲ್ಲಿಸಿದ್ದ ಮನವಿಯನ್ನ ಸೇಡಂ ತಹಶೀಲ್ದಾರ್ ತಿರಸ್ಕರಿಸಿದ್ದರು. ಹೀಗಿದ್ದರೂ ಪಥಸಂಚಲನ ನಡೆಸುವ ಯತ್ನ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪ್ರತಿನಿಧಿಸುವ ಸೇಡಂ ಕ್ಷೇತ್ರದಲ್ಲಿ ನಡೆದಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​ ಮಾಡಿ.

Follow Us
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More