ತೆರಿಗೆ ಕಟ್ಟದೆ ವಂಚನೆ: RTO ಅಧಿಕಾರಿಗಳಿಂದ 10ಕ್ಕೂ ಹೆಚ್ಚು ಐಷಾರಾಮಿ ಖಾಸಗಿ ಬಸ್ಗಳು ಸೀಜ್
ಪರ್ಮಿಟ್ ಇಲ್ಲದೆ, ತೆರಿಗೆ ಕಟ್ಟದೆ ರಾಜ್ಯದಲ್ಲಿ ಸಂಚರಿಸುತ್ತಿದ್ದ ಐಷಾರಾಮಿ ಖಾಸಗಿ ಬಸ್ಗಳಿಗೆ ಆರ್ಟಿಒ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರದ ಬಳಿ ನಡೆದ ಕಾರ್ಯಾಚರಣೆಯಲ್ಲಿ ಹತ್ತಕ್ಕೂ ಹೆಚ್ಚು ಬಸ್ಗಳನ್ನ ಸೀಜ್ ಮಾಡಲಾಗಿದೆ. ನಾಗಾಲ್ಯಾಂಡ್ ಅರುಣಾಚಲ ಪ್ರದೇಶ ಸೇರಿ ವಿವಿಧ ರಾಜ್ಯಗಳ ನೋಂದಣಿ ಇರುವ ಬಸ್ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಚಿಕ್ಕಬಳ್ಳಾಪುರ, ನವೆಂಬರ್ 16: ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರದ ಬಳಿ ಕಾರ್ಯಾಚರಣೆ ನಡೆಸಿರುವ ಆರ್ಟಿಒ ಅಧಿಕಾರಿಗಳು ಪರ್ಮಿಟ್ ಇಲ್ಲದೆ, ತೆರಿಗೆ ಕಟ್ಟದೆ ರಾಜ್ಯದಲ್ಲಿ ಸಂಚರಿಸುತ್ತಿದ್ದ 10ಕ್ಕೂ ಹೆಚ್ಚು ಐಷಾರಾಮಿ ಖಾಸಗಿ ಬಸ್ಗಳನ್ನ ಸೀಜ್ ಮಾಡಿದ್ದಾರೆ. ಹೈದರಾಬಾದ್ ಸೇರಿದಂತೆ ಬೇರೆ ಬೇರೆ ಸ್ಥಳಗಳಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಗಳನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಯಾಣಿಕರಿಗೆ ಬದಲಿ ವ್ಯವಸ್ಥೆ ಮಾಡಲಾಗಿದೆ. ನಾಗಾಲ್ಯಾಂಡ್ ಅರುಣಾಚಲ ಪ್ರದೇಶ ಸೇರಿ ವಿವಿಧ ರಾಜ್ಯಗಳ ನೋಂದಣಿ ಇರುವ ಬಸ್ಗಳನ್ನು ಅಧಿಕಾರಿಗಳು ತಪಾಸಣೆ ಮಾಡಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 16, 2025 02:45 PM