AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಿಜ ಜೀವನದಲ್ಲಿ ಇಂಥ ಹುಡುಗ ಸಿಕ್ರೆ ಒಪ್ಪಿಕೊಳ್ತೀನಿ’: ನಗುನಗುತ್ತಲೇ ಹೇಳಿದ ನಟಿ ರುಕ್ಮಿಣಿ ವಸಂತ್​

‘ನಿಜ ಜೀವನದಲ್ಲಿ ಇಂಥ ಹುಡುಗ ಸಿಕ್ರೆ ಒಪ್ಪಿಕೊಳ್ತೀನಿ’: ನಗುನಗುತ್ತಲೇ ಹೇಳಿದ ನಟಿ ರುಕ್ಮಿಣಿ ವಸಂತ್​

ಮದನ್​ ಕುಮಾರ್​
|

Updated on: Aug 18, 2023 | 7:51 PM

Share

‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ರಕ್ಷಿತ್​ ಶೆಟ್ಟಿ ಅವರು ಮನು ಎಂಬ ಪಾತ್ರ ಮಾಡಿದ್ದಾರೆ. ಅವರಿಗೆ ಜೋಡಿಯಾಗಿ ರುಕ್ಮಿಣಿ ವಸಂತ್​ ಅಭಿನಯಿಸಿದ್ದಾರೆ. ಈ ಸಿನಿಮಾದಲ್ಲಿ ಗಾಢವಾದ ಒಂದು ಲವ್​ ಸ್ಟೋರಿ ಇರಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ಟ್ರೇಲರ್​ ರಿಲೀಸ್​ ವೇಳೆ ರುಕ್ಮಿಣಿ ವಸಂತ್​ ಮಾತನಾಡಿದ್ದಾರೆ.

ಹೇಮಂತ್​ ಎಂ. ರಾವ್​ ಅವರು ನಿರ್ದೇಶನ ಮಾಡಿರುವ ‘ಸಪ್ತ ಸಾಗರದಾಚೆ ಎಲ್ಲೋ’ (Sapta Sagaradaache Ello) ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ಈ ಸಿನಿಮಾ ಎರಡು ಭಾಗಗಳಲ್ಲಿ ಬರುತ್ತಿದ್ದು, ಸೆಪ್ಟೆಂಬರ್​ 1ರಂದು ಮೊದಲ ಪಾರ್ಟ್​ ರಿಲೀಸ್​ ಆಗಲಿದೆ. ಈ ಚಿತ್ರದಲ್ಲಿ ರಕ್ಷಿತ್​ ಶೆಟ್ಟಿ (Rakshit Shetty) ಅವರು ಮನು ಎಂಬ ಪಾತ್ರ ಮಾಡಿದ್ದಾರೆ. ಅವರಿಗೆ ಜೋಡಿಯಾಗಿ ರುಕ್ಮಿಣಿ ವಸಂತ್​ ಅಭಿನಯಿಸಿದ್ದಾರೆ. ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾದಲ್ಲಿ ಗಾಢವಾದ ಒಂದು ಲವ್​ ಸ್ಟೋರಿ ಇರಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸುಳಿವು ಸಿಕ್ಕಿದೆ. ರಿಯಲ್​ ಲೈಫ್​ನಲ್ಲಿ ಮನು ಪಾತ್ರದ ರೀತಿಯ ಹುಡುಗ ಸಿಕ್ಕರೆ ಖಂಡಿತವಾಗಿಯೂ ಒಪ್ಪಿಕೊಳ್ಳುವುದಾಗಿ ರುಕ್ಮಿಣಿ ವಸಂತ್​ (Rukmini Vasanth) ಹೇಳಿದ್ದಾರೆ. ಈ ಸಿನಿಮಾಗೆ ಚರಣ್​ ರಾಜ್​ ಅವರು ಸಂಗೀತ ನೀಡಿದ್ದಾರೆ. ಅದ್ವೈತ್​ ಗುರುಮೂರ್ತಿ ಛಾಯಾಗ್ರಹಣ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More