Loading video

ಸುಳ್ಳಿನ ಆಡಳಿತದ ಅಂತ್ಯ; ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಅಮಿತ್ ಶಾ ಸಂತಸ

|

Updated on: Feb 08, 2025 | 6:03 PM

ಬಿಜೆಪಿ ರಾಷ್ಟ್ರ ರಾಜಧಾನಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ನೇತೃತ್ವದ ಆಮ್ ಆದ್ಮಿ ಪಕ್ಷವನ್ನು (ಎಎಪಿ) ಸೋಲಿಸಿ ಬಿಜೆಪಿ ಭರ್ಜರಿ ಪುನರಾಗಮನಕ್ಕೆ ಸಜ್ಜಾಗಿದೆ. ಈ ಬೃಹತ್ ಜನಾದೇಶಕ್ಕಾಗಿ ದೆಹಲಿಯ ಜನರಿಗೆ ಕೃತಜ್ಞತೆ ಸಲ್ಲಿಸಿದ ಅಮಿತ್ ಶಾ, ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ತನ್ನ ಎಲ್ಲಾ ಭರವಸೆಗಳನ್ನು ಈಡೇರಿಸುತ್ತದೆ ಮತ್ತು ದೆಹಲಿಯನ್ನು ವಿಶ್ವದ ನಂಬರ್ ಒನ್ ರಾಜಧಾನಿಯನ್ನಾಗಿ ಮಾಡುತ್ತದೆ ಎಂದು ಭರವಸೆ ನೀಡಿದರು.

ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವನ್ನು ಸೋಲಿಸಿ ಬಿಜೆಪಿ ಅಧಿಕಾರಕ್ಕೇರಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಸಂತಸ ವ್ಯಕ್ತಪಡಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ದೆಹಲಿಯಲ್ಲಿ ಸುಳ್ಳಿನ ಆಳ್ವಿಕೆ ಕೊನೆಗೊಂಡಿದೆ. ದೆಹಲಿಯ ಜನರು ಸುಳ್ಳು, ವಂಚನೆ ಮತ್ತು ಭ್ರಷ್ಟಾಚಾರದ ‘ಶೀಶ್​ ಮಹಲ್’ ಅನ್ನು ನಾಶಮಾಡುವ ಮೂಲಕ ದೆಹಲಿಯನ್ನು ಆಪ್ಡಾದಿಂದ ಮುಕ್ತಗೊಳಿಸಲು ನಿರ್ಧರಿಸಿ, ಮತ ಚಲಾಯಿಸಿದ್ದಾರೆ. ದೇಶಾದ್ಯಂತ ಸಾರ್ವಜನಿಕರಿಗೆ ಸುಳ್ಳು ಭರವಸೆಗಳನ್ನು ನೀಡುವವರಿಗೆ ದೆಹಲಿಯು ಒಂದು ಉದಾಹರಣೆಯಾಗಿದೆ ಎಂದು ಹೇಳಿದ್ದಾರೆ. ಹಾಗೇ, ದೆಹಲಿಯ ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿದ ಅಮಿತ್ ಶಾ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರೊಂದಿಗೆ ಸಂಭ್ರಮಾಚರಣೆಯಲ್ಲಿ ಭಾಗಿಯಾಗಿದ್ದಾರೆ.

 

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ