Channapatna By Poll Result: ಉಪ ಚುನಾವಣೆಗಳಲ್ಲಿ ಸಾಮಾನ್ಯವಾಗಿ ಆಡಳಿತ ಪಕ್ಷವೇ ಗೆಲ್ಲುತ್ತದೆ: ಜಿಟಿ ದೇವೇಗೌಡ

ಅರುಣ್​ ಕುಮಾರ್​ ಬೆಳ್ಳಿ

Updated on: Nov 23, 2024 | 4:26 PM

Channapatna By Poll Result: ಸೋಲನ್ನು ನಿಖಿಲ್ ಸ್ಪೋರ್ಟ್ ಆಗಿ ತೆಗೆದುಕೊಳ್ಳಬೇಕು, ಪ್ರಜಾಪ್ರಭುತ್ವದಲ್ಲಿ ವ್ಯವಸ್ಥೆಯಲ್ಲಿ ಸೋಲು ಗೆಲುವು ಇದ್ದಿದ್ದೇ, ಆದರೆ ನಿಖಿಲ್​ಗೆ ಮೂರನೇ ಬಾರಿ ಸೋಲಾಗಿದೆ, ಎರಡು ಬಾರಿ ಸೋತವರು ಮೂರನೇ ಬಾರಿ ಗೆದ್ದು ಮಂತ್ರಿಯಾಗಿರುವ ನಿದರ್ಶನಗಳನ್ನು ನೋಡಿದ್ದೇವೆ, ಹಾಗಾಗಿ ನಿಖಿಲ್ ಎದೆಗುಂದುವ ಅವಶ್ಯಕತೆಯಿಲ್ಲ ಎಂದು ದೇವೇಗೌಡ ಹೇಳಿದರು.

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದೆ ಮತ್ತು ಆಡಳಿತ ನಡೆಸುತ್ತಿದೆ, ಉಪ ಚುನಾವಣೆಗಳಲ್ಲಿ ಸಾಮಾನ್ಯವಾಗಿ ಆಡಳಿತ ಪಕ್ಷವೇ ಗೆಲ್ಲುತ್ತದೆ ಎಂದು ಚನ್ನಪಟ್ಟಣ ಉಪ ಚುನಾವಣೆಯ ಫಲಿತಾಂಶದ ಬಗ್ಗೆ ಜೆಡಿಎಸ್ ಶಾಸಕ ಜಿಟಿ ದೇವೇಗೌಡ ಪ್ರತಿಕ್ರಿಯೆ ನೀಡಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ತಾನಂತೂ ಚುನಾವಣಾ ಪ್ರಚಾರಕ್ಕೆ ಹೋಗಲಿಲ್ಲ, ಆದರೆ ತನ್ನ ಮಗ ಹರೀಶ್ ಗೌಡ ಮತ್ತು ಬೇರೆ ಕಾರ್ಯಕರ್ತರು ನಿಖಿಲ್ ಕುಮಾರಸ್ವಾಮಿ ಗೆದ್ದೇಗೆಲ್ಲುತ್ತಾರೆ ಎಂದಿದ್ದರು ಅಂತ ದೇವೇಗೌಡ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಡಿಕೆಶಿ ಸಿಎಂ ಆಗುವ ಉಪ ಚುನಾವಣೆ ಇದು: ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.