ರಾಜ್ಯದಲ್ಲಿ ಮತ್ತೊಂದು ದುರಂತ: ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಸ್ಲೀಪರ್ ಬಸ್
ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್ಗೆ ಸೇರಿದ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ. ಬೆಂಕಿ ಕಂಡಿದ್ದೇ ಚಾಲಕ ಬಸ್ ನಿಲ್ಲಿಸಲು ಯತ್ನಿಸಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಬಸ್ ಮರಕ್ಕೆ ಗುದ್ದಿದೆ ಎನ್ನಲಾಗಿದೆ. ಅದೃಷ್ಟವಶಾತ್ ಬಸ್ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಿವಮೊಗ್ಗ, ಜನವರಿ 28: ಚಿತ್ರದುರ್ಗದ ಬಳಿ ನಡೆದ ಬಸ್ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್ ಬಸ್ಸೊಂದು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ. ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್ಗೆ ಸೇರಿದ ಖಾಸಗಿ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ. ಬಸ್ನಲ್ಲಿದ್ದ 36 ಪ್ರಯಾಣಿಕರು ಕೂಡಲೇ ಕೆಳಗಿಳಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದೆ. ಘಟನೆಯಲ್ಲಿ 4-5 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.
ಪ್ರೀತಿ, ಮದ್ವೆ ಹೆಸರಲ್ಲಿ ಯುವಕರಿಗೆ ಗಾಳ ಹಾಕುತ್ತಿದ್ದವಳು ಮಾಡಿದ್ದೇನು?
ಮುಂಬೈನಲ್ಲಿ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜಾಗಿಂಗ್; ಕಣ್ಣೆತ್ತೂ ನೋಡದ ಜನ
ಮನೆಗಾಗಿ ಕಾಯುತ್ತಿದ್ದ ಕೋಗಿಲು ನಿವಾಸಿಗಳಿಗೆ ಬಿಗ್ ಶಾಕ್
ರಸ್ತೆ ಮಧ್ಯೆ ರಕ್ತದ ಮಡುವಿನಲ್ಲಿ ಒದ್ದಾಡುತ್ತಿದ್ದರೂ ಬಾರದ ಆಂಬುಲೆನ್ಸ್
