ರಾಜ್ಯದಲ್ಲಿ ಮತ್ತೊಂದು ದುರಂತ: ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಸ್ಲೀಪರ್​​ ಬಸ್​​

Edited By:

Updated on: Jan 28, 2026 | 6:32 AM

ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್​​ಗೆ ಸೇರಿದ ಖಾಸಗಿ ಬಸ್​​​ನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬಸ್​​ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ. ಬೆಂಕಿ ಕಂಡಿದ್ದೇ ಚಾಲಕ ಬಸ್​​ ನಿಲ್ಲಿಸಲು ಯತ್ನಿಸಿದ್ದು, ಈ ವೇಳೆ ನಿಯಂತ್ರಣ ತಪ್ಪಿ ಬಸ್​​ ಮರಕ್ಕೆ ಗುದ್ದಿದೆ ಎನ್ನಲಾಗಿದೆ. ಅದೃಷ್ಟವಶಾತ್​​ ಬಸ್​​ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಶಿವಮೊಗ್ಗ, ಜನವರಿ 28: ಚಿತ್ರದುರ್ಗದ ಬಳಿ ನಡೆದ ಬಸ್​​ ದುರಂತ ಮಾಸುವ ಮುನ್ನವೇ ಮತ್ತೊಂದು ಅವಘಡ ನಡೆದಿದೆ. ಆಕಸ್ಮಿಕವಾಗಿ ಕಾಣಿಸಿಕೊಂಡಿದ್ದ ಬೆಂಕಿಯಿಂದ ಖಾಸಗಿ ಸ್ಲೀಪರ್​​ ಬಸ್ಸೊಂದು ಸಂಪೂರ್ಣವಾಗಿ ಅಗ್ನಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೂಡುರು ಬಳಿ ನಡೆದಿದೆ. ನಿಟ್ಟೂರಿಂದ ಬೆಂಗಳೂರಿಗೆ ಹೊರಟಿದ್ದ ಅನ್ನಪೂರ್ಣೇಶ್ವೇರಿ ಟ್ರಾವಲ್ಸ್​​ಗೆ ಸೇರಿದ ಖಾಸಗಿ ಬಸ್​​​ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ವೇಳೆ ಬಸ್​​ ನಿಲ್ಲಿಸಲು ಚಾಲಕ ಮುಂದಾದಾಗ ಮರಕ್ಕೆ ಡಿಕ್ಕಿಯಾಗಿದೆ. ಬಸ್​​ನಲ್ಲಿದ್ದ 36 ಪ್ರಯಾಣಿಕರು ಕೂಡಲೇ ಕೆಳಗಿಳಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದೆ. ಘಟನೆಯಲ್ಲಿ 4-5 ಪ್ರಯಾಣಿಕರಿಗೆ ಸುಟ್ಟ ಗಾಯಗಳಾಗಿದ್ದು, ಗಾಯಾಳುಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.