ರಾಷ್ಟ್ರಪತಿ ಭವನದಲ್ಲಿ ಔತಣ ಮುಗಿಸಿ ರಷ್ಯಾಗೆ ಮರಳಿದ ಪುಟಿನ್
ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ತಮ್ಮ 2 ದಿನಗಳ ಭಾರತ ಭೇಟಿಯನ್ನು ಮುಗಿಸಿದ ನಂತರ ದೆಹಲಿಯಿಂದ ರಷ್ಯಾಗೆ ವಾಪಾಸ್ ತೆರಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ತಮ್ಮ ಎರಡು ದಿನಗಳ ಭಾರತ ಪ್ರವಾಸವನ್ನು ಮುಗಿಸಿದ ನಂತರ ನವದೆಹಲಿಯಿಂದ ರಷ್ಯಾಗೆ ವಾಪಾಸ್ ತೆರಳಿದ್ದಾರೆ. ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಪುಟಿನ್ ಅವರನ್ನು ಬೀಳ್ಕೊಡಲು ವಿಮಾನ ನಿಲ್ದಾಣದಲ್ಲಿ ಹಾಜರಿದ್ದರು.
ನವದೆಹಲಿ, ಡಿಸೆಂಬರ್ 5: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russia President Putin) ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಆಯೋಜಿಸಿದ್ದ ಔತಣಕೂಟದಲ್ಲಿ ಭಾಗವಹಿಸಿದ ನಂತರ ರಾಷ್ಟ್ರಪತಿ ಭವನದಿಂದ ನಿರ್ಗಮಿಸಿದ್ದಾರೆ. ದೆಹಲಿ ವಿಮಾನ ನಿಲ್ದಾಣದಿಂದ ಅವರು ರಷ್ಯಾಗೆ ವಾಪಾಸ್ ತೆರಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ತಮ್ಮ ಎರಡು ದಿನಗಳ ಭಾರತ ಪ್ರವಾಸವನ್ನು ಮುಗಿಸಿದ ನಂತರ ನವದೆಹಲಿಯಿಂದ ರಷ್ಯಾಗೆ ವಾಪಾಸ್ ತೆರಳಿದ್ದಾರೆ. ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಪುಟಿನ್ ಅವರನ್ನು ಬೀಳ್ಕೊಡಲು ವಿಮಾನ ನಿಲ್ದಾಣದಲ್ಲಿ ಹಾಜರಿದ್ದರು.
ಇಂದು ರಾಷ್ಟ್ರಪತಿ ಭವನದಲ್ಲಿ ಪುಟಿನ್ ಅವರಿಗೆ ಸಾಂಪ್ರದಾಯಿಕ ಸ್ವಾಗತ ನೀಡಲಾಯಿತು. ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸಿದರು. ರಷ್ಯಾದ ಅಧ್ಯಕ್ಷ ಪುಟಿನ್ ಗುರುವಾರ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಅಲ್ಲಿ ಅವರನ್ನು ಪ್ರಧಾನಿ ಮೋದಿ ಸ್ವಾಗತಿಸಿದರು. ನಂತರ, ಪುಟಿನ್ 7, ಲೋಕ ಕಲ್ಯಾಣ್ ಮಾರ್ಗದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಭೋಜನಕೂಟದಲ್ಲಿ ಭಾಗವಹಿಸಿದರು. ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಉನ್ನತ ಮಟ್ಟದ ಸಭೆ ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ನಡೆಯಿತು. ಇದಾದ ನಂತರ ಇಂದು ರಾತ್ರಿ ರಾಷ್ಟ್ರಪತಿ ಭವನದಲ್ಲಿ ಪುಟಿನ್ ಅವರಿಗಾಗಿ ವಿಶೇಷ ಔತಣಕೂಟವನ್ನು ಏರ್ಪಡಿಸಲಾಗಿತ್ತು. ಊಟ ಮುಗಿಸಿದ ಬಳಿಕ ಪುಟಿನ್ ಅವರು ರಷ್ಯಾಗೆ ವಾಪಾಸ್ ತೆರಳಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

