ರಾಷ್ಟ್ರಪತಿ ಭವನದಲ್ಲಿ ರಷ್ಯಾ ಅಧ್ಯಕ್ಷ ಪುಟಿನ್​ಗೆ ಸೇನಾಪಡೆಯಿಂದ ಸ್ವಾಗತ

Updated on: Dec 05, 2025 | 7:52 PM

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ನಿನ್ನೆ ರಾತ್ರಿ ಪ್ರಧಾನಿ ಮೋದಿಯವರ ಜೊತೆ ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ಇಂದು ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ಮತ್ತು ಮೂರು ಸೇನಾಪಡೆಗಳ ಗೌರವ ವಂದನೆ ನೀಡಲಾಯಿತು. ಇಂದು ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ರಷ್ಯಾದ ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಇದಾದ ನಂತರ, ಪುಟಿನ್ ರಾಜ್ ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ನವದೆಹಲಿ, ಡಿಸೆಂಬರ್ 5: ಭಾರತದ ಭೇಟಿಗಾಗಿ ನಿನ್ನೆ (ಗುರುವಾರ) ದೆಹಲಿಗೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Russia President Putin) ನಿನ್ನೆ ರಾತ್ರಿ ಪ್ರಧಾನಿ ಮೋದಿಯವರ ಜೊತೆ ಔತಣಕೂಟದಲ್ಲಿ ಪಾಲ್ಗೊಂಡಿದ್ದರು. ಇಂದು ಅವರಿಗೆ ರಾಷ್ಟ್ರಪತಿ ಭವನದಲ್ಲಿ ಸಾಂಪ್ರದಾಯಿಕ ಸ್ವಾಗತ ಮತ್ತು ಮೂರು ಸೇನಾಪಡೆಗಳ ಗೌರವ ವಂದನೆ ನೀಡಲಾಯಿತು. ಇಂದು ಬೆಳಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಪತಿ ಭವನದ ಮುಂಭಾಗದಲ್ಲಿ ರಷ್ಯಾದ ಅಧ್ಯಕ್ಷರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಇದಾದ ನಂತರ, ಪುಟಿನ್ ರಾಜ್ ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಗೌರವ ಸಲ್ಲಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More