AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು

ಉಕ್ರೇನ್ ಮೇಲೆ ರಷ್ಯಾದಿಂದ ಭೀಕರ ದಾಳಿ; ಶಾಲಾ ಕಟ್ಟಡ ಧ್ವಂಸವಾಗಿ 29 ಜನ ಸಾವು

ಸುಷ್ಮಾ ಚಕ್ರೆ
|

Updated on: Nov 03, 2026 | 10:27 PM

Share

ವೈಮಾನಿಕ ದಾಳಿಯ ವೇಳೆ ರಷ್ಯಾದ ಕ್ಷಿಪಣಿಯೊಂದು ಶಾಲಾ ಕಟ್ಟಡಕ್ಕೆ ನೇರವಾಗಿ ಅಪ್ಪಳಿಸಿದ್ದು, ಇಡೀ ಕಟ್ಟಡವು ಕ್ಷಣಮಾತ್ರದಲ್ಲಿ ನೆಲಸಮವಾಗಿದೆ. ಈ ಶಾಲೆಯಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರಿಂದ ಸಾವು-ನೋವಿನ ಸಂಖ್ಯೆ ಹೆಚ್ಚಾಗಿದೆ. ಈ ಘಟನೆಯಲ್ಲಿ 29 ಜನರು ಜೀವ ಕಳೆದುಕೊಂಡಿರುವುದು ದೃಢಪಟ್ಟಿದ್ದು, ರಕ್ಷಣಾ ಪಡೆಗಳು ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹೊರತೆಗೆಯಲು ಹಗಲಿರುಳು ಕಾರ್ಯಾಚರಣೆ ನಡೆಸುತ್ತಿವೆ. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಕೈವ್, ನವೆಂಬರ್ 3: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಉಕ್ರೇನ್‌ನ ವಿವಿಧ ನಗರಗಳನ್ನು ಗುರಿಯಾಗಿಸಿಕೊಂಡು ರಷ್ಯಾ ಪಡೆಗಳು ಭೀಕರ ವೈಮಾನಿಕ ಹಾಗೂ ಕ್ಷಿಪಣಿ ದಾಳಿಗಳನ್ನು ನಡೆಸಿವೆ. ಈ ಭೀಕರ ದಾಳಿಯಲ್ಲಿ ಶಾಲಾ ಕಟ್ಟಡವೊಂದು ಸಂಪೂರ್ಣವಾಗಿ ಧ್ವಂಸಗೊಂಡು ಬೂದಿಯಾಗಿದ್ದು, 29 ಜನರು ಮೃತಪಟ್ಟಿದ್ದಾರೆ ಮತ್ತು ಹಲವಾರು ನಾಗರಿಕರು ತೀವ್ರವಾಗಿ ಗಾಯಗೊಂಡಿದ್ದಾರೆ. ಈ ದಾಳಿಯ ತೀವ್ರತೆಗೆ ಶಾಲಾ ಮುಂಭಾಗ ಹಾಗೂ ವಸತಿ ಸಮುಚ್ಚಯಗಳು ನೆಲಸಮಗೊಂಡಿವೆ ಎಂದು ಉಕ್ರೇನ್ ಅಧಿಕಾರಿಗಳು ತಿಳಿಸಿದ್ದಾರೆ.

ವೈಮಾನಿಕ ದಾಳಿಯ ವೇಳೆ ರಷ್ಯಾದ ಕ್ಷಿಪಣಿಯೊಂದು ಶಾಲಾ ಕಟ್ಟಡಕ್ಕೆ ನೇರವಾಗಿ ಅಪ್ಪಳಿಸಿದ್ದು, ಇಡೀ ಕಟ್ಟಡವು ಕ್ಷಣಮಾತ್ರದಲ್ಲಿ ನೆಲಸಮವಾಗಿದೆ. ಈ ಶಾಲೆಯಲ್ಲಿದ್ದ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದರಿಂದ ಸಾವು-ನೋವಿನ ಸಂಖ್ಯೆ ಹೆಚ್ಚಾಗಿದೆ. ಈ ಘಟನೆಯಲ್ಲಿ 29 ಜನರು ಜೀವ ಕಳೆದುಕೊಂಡಿರುವುದು ದೃಢಪಟ್ಟಿದ್ದು, ರಕ್ಷಣಾ ಪಡೆಗಳು ಅವಶೇಷಗಳ ಅಡಿಯಿಂದ ಮೃತದೇಹಗಳನ್ನು ಹೊರತೆಗೆಯಲು ಹಗಲಿರುಳು ಕಾರ್ಯಾಚರಣೆ ನಡೆಸುತ್ತಿವೆ. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಶಾಲಾ ಮಕ್ಕಳನ್ನು ಮತ್ತು ನಾಗರಿಕರನ್ನು ಗುರಿಯಾಗಿಸಿಕೊಂಡು ನಡೆಸಿರುವ ಈ ದಾಳಿಯನ್ನು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ತೀವ್ರವಾಗಿ ಖಂಡಿಸಿದ್ದು, ಇದು ರಷ್ಯಾದ ಯುದ್ಧ ಅಪರಾಧಕ್ಕೆ ಸಾಕ್ಷಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ರಷ್ಯಾದ ವೈಮಾನಿಕ ದಾಳಿಗಳನ್ನು ತಡೆಯಲು ಉಕ್ರೇನ್‌ಗೆ ಶೀಘ್ರವೇ ಹೆಚ್ಚುವರಿ ವಾಯು ರಕ್ಷಣಾ ವ್ಯವಸ್ಥೆಗಳನ್ನು ಪೂರೈಸುವಂತೆ ಅವರು ಪಾಶ್ಚಿಮಾತ್ಯ ದೇಶಗಳಿಗೆ ಮನವಿ ಮಾಡಿದ್ದಾರೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ 

Follow Us
ಸುಷ್ಮಾ ಚಕ್ರೆ
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More