ಉಕ್ರೇನ್ ಮೇಲೆ ಮತ್ತೆ ರಷ್ಯಾದಿಂದ ಡ್ರೋನ್ ದಾಳಿ; ನಾಲ್ವರು ಸಾವು, 21 ಜನರಿಗೆ ಗಾಯ
ಉಕ್ರೇನ್‌ನ ಡ್ನಿಪ್ರೊದಲ್ಲಿ ರಷ್ಯಾ ನಡೆಸಿದ ದಾಳಿಯಲ್ಲಿ ನಾಲ್ವರು ಸಾವನ್ನಪ್ಪಿ, 21 ಜನರು ಗಾಯಗೊಂಡಿದ್ದಾರೆ. ದಕ್ಷಿಣ ಪ್ರದೇಶದ ವಸತಿ ಕಟ್ಟಡಗಳು, ಬಂದರು ಮೂಲಸೌಕರ್ಯ ಮತ್ತು ಕಾರುಗಳು ಹಾನಿಗೊಳಗಾಗಿವೆ ಎಂದು ಪ್ರಾದೇಶಿಕ ಮುಖ್ಯಸ್ಥ ಒಲೆಹ್ ಕೈಪರ್ ತಿಳಿಸಿದ್ದಾರೆ. ರಷ್ಯಾದಲ್ಲಿ, ಬೆಲ್ಗೊರೊಡ್‌ನ ಗಡಿ ಪ್ರದೇಶದಲ್ಲಿ ಡ್ರೋನ್ ದಾಳಿಯಿಂದ ಒಬ್ಬ ಮಹಿಳೆ ಸಾವನ್ನಪ್ಪಿದ್ದಾರೆ ಮತ್ತು ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ.
ಕೈವ್, ಏಪ್ರಿಲ್ 25: ಉಕ್ರೇನಿಯನ್ ನಗರವಾದ ಡ್ನಿಪ್ರೊ ಮೇಲೆ ರಷ್ಯಾದ (Russian Drone Attack) ಡ್ರೋನ್ ಮತ್ತು ಕ್ಷಿಪಣಿ ದಾಳಿಯನ್ನು ನಡೆಸಿದೆ. ಈ ದಾಳಿಯಲ್ಲಿ 4 ಜನರು ಸಾವನ್ನಪ್ಪಿದ್ದು, 21 ಜನರು ಗಾಯಗೊಂಡಿದ್ದಾರೆ. ರಾತ್ರಿಯಿಡೀ ನಡೆದ ದಾಳಿಯಲ್ಲಿ ನಾಶವಾದ ಮನೆಯ ಅವಶೇಷಗಳಲ್ಲಿ ನಾಲ್ವರ ಶವಗಳು ಪತ್ತೆಯಾಗಿವೆ. ” ರಷ್ಯಾದ ದಾಳಿಯ ನಂತರ ಡ್ನಿಪ್ರೊದಲ್ಲಿನ ಆಸ್ಪತ್ರೆಗಳಲ್ಲಿ 11 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ಉಕ್ರೇನಿಯನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ.
ರಷ್ಯನ್ನರು ರಾತ್ರಿಯಿಡೀ ಡ್ನಿಪ್ರೊ, ಇತರೆ ನಗರಗಳು ಮತ್ತು ಸಮುದಾಯಗಳ ಮೇಲೆ ದಾಳಿ ಮಾಡುತ್ತಿದ್ದಾರೆ. ಇದರಿಂದಾಗಿ ಡ್ನಿಪ್ರೊದಾದ್ಯಂತ ಬೆಂಕಿ ಹೊತ್ತಿಕೊಂಡಿತು. ಬೆಂಕಿಯಲ್ಲಿ ಹಲವಾರು ಅಪಾರ್ಟ್ಮೆಂಟ್ ಕಟ್ಟಡಗಳು, ಕಾಂಪ್ಲೆಕ್ಸ್ಗಳು ನಾಶವಾದವು. ಒಡೆಸಾ ಪ್ರದೇಶದ ಮೇಲೆ ರಾತ್ರಿಯಿಡೀ ನಡೆದ ಡ್ರೋನ್ ದಾಳಿಯಲ್ಲಿ ಇಬ್ಬರು ಗಾಯಗೊಂಡರು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

