ಕೃಷ್ಣ ಭಜನೆ, ಭಾರತೀಯ ನೃತ್ಯದ ಮೂಲಕ ರಷ್ಯಾದಲ್ಲಿ ಪ್ರಧಾನಿ ಮೋದಿಗೆ ಸ್ವಾಗತ

|

Updated on: Oct 22, 2024 | 4:27 PM

ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಕಜಾನ್ ನಗರಕ್ಕೆ ತೆರಳಿದ್ದಾರೆ. ಕಜಾನ್‌ನಲ್ಲಿ ಪ್ರಧಾನಿ ಮೋದಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಪ್ರಧಾನಿ ಮೋದಿಯವರು ಆಗಮಿಸುತ್ತಿದ್ದಂತೆ ರಷ್ಯಾದ ನಾಗರಿಕರು ಕೃಷ್ಣ ಭಜನೆಗಳನ್ನು ಹಾಡಿದರು ಮತ್ತು ಭಾರತೀಯ ನೃತ್ಯವನ್ನೂ ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಭಾರತೀಯ ವಲಸಿಗರು ಕೂಡ ಪ್ರಧಾನಿ ಮೋದಿ ಅವರನ್ನು ಭೇಟಿಯಾದರು.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ರಷ್ಯಾ ಪ್ರವಾಸದಲ್ಲಿದ್ದಾರೆ. ರಷ್ಯಾದ ಕಜಾನ್‌ನಲ್ಲಿ ನಡೆಯುತ್ತಿರುವ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ರಷ್ಯಾಕ್ಕೆ ತೆರಳಿದ್ದಾರೆ. ಕಜಾನ್‌ನಲ್ಲಿ ಪ್ರಧಾನಿ ಮೋದಿಯವರಿಗೆ ಭವ್ಯ ಸ್ವಾಗತ ನೀಡಲಾಯಿತು. ರಷ್ಯಾದ ನಾಗರಿಕರು ಅವರ ಗೌರವಾರ್ಥ ಕೃಷ್ಣ ಭಜನೆಗಳನ್ನು ಹಾಡಿದರು. ಬಳಿಕ ಪ್ರಧಾನಿ ಮೋದಿ ಅವರು ರಷ್ಯಾದಲ್ಲಿನ ಭಾರತೀಯ ವಲಸಿಗರನ್ನು ಭೇಟಿಯಾದರು. ಎಲ್ಲೆಡೆ ಜನರ ಕೈಯಲ್ಲಿ ತ್ರಿವರ್ಣ ಧ್ವಜವು ಕಂಡುಬಂದಿತು. ಸುಮಾರು 62 ಸಾವಿರ ಭಾರತೀಯ ವಲಸಿಗರು ರಷ್ಯಾದಲ್ಲಿ ವಾಸಿಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us on