ದ್ವಿಶತಕ ಬಾರಿಸಿದರೂ ಪೃಥ್ವಿ ಶಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿಲ್ಲ… ಆಮೇಲೇನಾಯ್ತು?
Chandigarh vs Maharashtra: ಮೊದಲ ಇನಿಂಗ್ಸ್ನಲ್ಲಿನ 104 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ನಲ್ಲಿ 464 ರನ್ಗಳ ಗುರಿ ಪಡೆದ ಚಂಡೀಗಢ್ ತಂಡವನ್ನು 359 ರನ್ಗಳಿಗೆ ಆಲೌಟ್ ಮಾಡುವಲ್ಲಿ ಮಹಾರಾಷ್ಟ್ರ ತಂಡ ಯಶಸ್ವಿಯಾಗಿದೆ. ಈ ಮೂಲಕ 144 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಚಂಡೀಗಢ್ನ ಸೆಕ್ಟೆರ್-16 ಸ್ಟೇಡಿಯಂನಲ್ಲಿ ನಡೆದ ರಣಜಿ ಟೂರ್ನಿಯ ಗ್ರೂಪ್-ಬಿ ಪಂದ್ಯದಲ್ಲಿ ಮಹಾರಾಷ್ಟ್ರ ತಂಡ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಚಂಡೀಗಢ್ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಮಹಾರಾಷ್ಟ್ರ ಪರ ರುತುರಾಜ್ ಗಾಯಕ್ವಾಡ್ 116 ರನ್ ಬಾರಿಸಿದ್ದರು. ಈ ಶತಕದ ನೆರವಿನೊಂದಿಗೆ ಮಹಾರಾಷ್ಟ್ರ ತಂಡ ಮೊದಲ ಇನಿಂಗ್ಸ್ನಲ್ಲಿ 313 ರನ್ ಪೇರಿಸಿದ್ದರು. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಚಂಡೀಗಢ್ ತಂಡ 209 ರನ್ಗಳಿಗೆ ಆಲೌಟ್ ಆಗಿತ್ತು.
ಇನ್ನು ದ್ವಿತೀಯ ಇನಿಂಗ್ಸ್ನಲ್ಲಿ ಮಹಾರಾಷ್ಟ್ರ ಪರ ಪೃಥ್ವಿ ಶಾ 156 ಎಸೆತಗಳಲ್ಲಿ 29 ಫೋರ್ ಹಾಗೂ 5 ಸಿಕ್ಸರ್ಗಳೊಂದಿಗೆ ಅಜೇಯ 222 ರನ್ ಬಾರಿಸಿದ್ದರು. ಈ ಮೂಲಕ ಮಹಾರಾಷ್ಟ್ರ ತಂಡ 3 ವಿಕೆಟ್ ನಷ್ಟಕ್ಕೆ 359 ರನ್ಗಳಿಸಿ ಡಿಕ್ಲೇರ್ ಘೋಷಿಸಿತು.
ಮೊದಲ ಇನಿಂಗ್ಸ್ನಲ್ಲಿನ 104 ರನ್ಗಳ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ನಲ್ಲಿ 464 ರನ್ಗಳ ಗುರಿ ಪಡೆದ ಚಂಡೀಗಢ್ ತಂಡವನ್ನು 359 ರನ್ಗಳಿಗೆ ಆಲೌಟ್ ಮಾಡುವಲ್ಲಿ ಮಹಾರಾಷ್ಟ್ರ ತಂಡ ಯಶಸ್ವಿಯಾಗಿದೆ. ಈ ಮೂಲಕ 144 ರನ್ಗಳ ಭರ್ಜರಿ ಜಯ ಸಾಧಿಸಿದೆ.
ಈ ಗೆಲುವಿನ ಬಳಿಕ ದ್ವಿಶತಕ ಬಾರಿಸಿದ ಪೃಥ್ವಿ ಶಾಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ನೀಡಿರಲಿಲ್ಲ. ಬದಲಾಗಿ ಮೊದಲ ಇನಿಂಗ್ಸ್ನಲ್ಲಿ ಶತಕ ಸಿಡಿಸಿ ಮಹಾರಾಷ್ಟ್ರ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ ರುತುರಾಜ್ ಗಾಯಕ್ವಾಡ್ಗೆ ಪ್ಲೇಯರ್ ಆಫ್ ದಿ ಮ್ಯಾಚ್ ಪ್ರಶಸ್ತಿ ನೀಡಲಾಗಿತ್ತು.
ಆದರೆ ಈ ಪ್ರಶಸ್ತಿಯನ್ನು ರುತುರಾಜ್ ಗಾಯಕ್ವಾಡ್ ತನ್ನ ಸಹ ಆಟಗಾರ ಪೃಥ್ವಿ ಶಾ ಅವರೊಂದಿಗೆ ಹಂಚಿಕೊಳ್ಳುವ ಮೂಲಕ ಕ್ರೀಡಾಸ್ಫೂರ್ತಿ ಮೆರೆದರು. ಇದೀಗ ಗಾಯಕ್ವಾಡ್ ಅವರ ನಡೆಗೆ ಬಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

