ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ
MI Cape Town vs Durban Super Giants: 233 ರನ್ಗಳ ಕಠಿಣ ಗುರಿ ಬೆನ್ನತ್ತಿದ ಎಂಐ ಕೇಪ್ಟೌನ್ ಪರ ಆರಂಭಿಕನಾಗಿ ರಯಾನ್ ರಿಕೆಲ್ಟನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 63 ಎಸೆತಗಳನ್ನು ಎದುರಿಸಿದ ರಿಕೆಲ್ಟನ್ 11 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 113 ರನ್ ಬಾರಿಸಿದರು. ಇದಾಗ್ಯೂ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಎಂಐ ಕೇಪ್ಟೌನ್ ತಂಡವು 20 ಓವರ್ಗಳಲ್ಲಿ 217 ರನ್ಗಳಿಸಿ 15 ರನ್ಗಳಿಂದ ಸೋಲೊಪ್ಪಿಕೊಂಡಿತು.
ಸೌತ್ ಆಫ್ರಿಕಾ ಟಿ20 ಲೀಗ್ನ ಹಾಲಿ ಚಾಂಪಿಯನ್ಸ್ ಎಂಐ ಕೇಪ್ಟೌನ್ ವಿರುದ್ಧ ಡರ್ಬನ್ ಸೂಪರ್ ಜೈಂಟ್ಸ್ ಭರ್ಜರಿ ಜಯ ಸಾಧಿಸಿದೆ. ಕೇಪ್ಟೌನ್ನ ನ್ಯೂಲ್ಯಾಂಡ್ಸ್ ಮೈದಾನದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಡರ್ಬನ್ ಸೂಪರ್ ಜೈಂಟ್ಸ್ ತಂಡದ ನಾಯಕ ಐಡೆನ್ ಮಾರ್ಕ್ರಾಮ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.
ಅದರಂತೆ ಮೊದಲು ಬ್ಯಾಟ್ ಮಾಡಿದ ಡರ್ಬನ್ ಸೂಪರ್ ಜೈಂಟ್ಸ್ ಪರ ಡೆವೊನ್ ಕಾನ್ವೆ 64 ರನ್ ಬಾರಿಸಿದರೆ, ಕೇನ್ ವಿಲಿಯಮ್ಸನ್ 40 ರನ್ಗಳ ಕೊಡುಗೆ ನೀಡಿದರು. ಇನ್ನು ಮಾರ್ಕ್ರಾಮ್ 35 ರನ್ ಕಲೆಹಾಕಿದರೆ, ಇವಾನ್ ಜೋನ್ಸ್ 33 ರನ್ಗಳ ರನ್ಗಳಿಸಿದರು. ಈ ಮೂಲಕ ಡರ್ಬನ್ ಸೂಪರ್ ಜೈಂಟ್ಸ್ 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 232 ರನ್ ಕಲೆಹಾಕಿತು.
233 ರನ್ಗಳ ಕಠಿಣ ಗುರಿ ಬೆನ್ನತ್ತಿದ ಎಂಐ ಕೇಪ್ಟೌನ್ ಪರ ಆರಂಭಿಕನಾಗಿ ರಯಾನ್ ರಿಕೆಲ್ಟನ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 63 ಎಸೆತಗಳನ್ನು ಎದುರಿಸಿದ ರಿಕೆಲ್ಟನ್ 11 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 113 ರನ್ ಬಾರಿಸಿದರು. ಇದಾಗ್ಯೂ ಉಳಿದ ಬ್ಯಾಟರ್ಗಳಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ. ಪರಿಣಾಮ ಎಂಐ ಕೇಪ್ಟೌನ್ ತಂಡವು 20 ಓವರ್ಗಳಲ್ಲಿ 217 ರನ್ಗಳಿಸಿ 15 ರನ್ಗಳಿಂದ ಸೋಲೊಪ್ಪಿಕೊಂಡಿತು.
