2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
Ryan Rickleton: ಈ ಪಂದ್ಯದಲ್ಲಿ ಸೆಂಚುರಿ ಸಿಡಿಸುವ ಮೂಲಕ ರಯಾನ್ ರಿಕೆಲ್ಟನ್ ಸೌತ್ ಆಫ್ರಿಕಾ ಟಿ20 ಲೀಗ್ನ ಸೀಸನ್ವೊಂದರಲ್ಲಿ 2 ಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಡರ್ಬನ್ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 113 ರನ್ಗಳ ಇನಿಂಗ್ಸ್ ಆಡಿದ್ದರು. ಈ ಮೂಲಕ ರಯಾನ್ ರಿಕೆಲ್ಟನ್ ಸೌತ್ ಆಫ್ರಿಕಾ ಟಿ20 ಲೀಗ್ ಸೀಸನ್ವೊಂದರಲ್ಲಿ 2 ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
ಸೌತ್ ಆಫ್ರಿಕಾ ಟಿ20 ಲೀಗ್ನ ಸೀಸನ್ವೊಂದರಲ್ಲಿ ಎರಡು ಶತಕಗಳನ್ನು ಬಾರಿಸುವ ಮೂಲಕ ರಯಾನ್ ರಿಕೆಲ್ಟನ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಜೋಹಾನ್ಸ್ಬರ್ಗ್ನಲ್ಲಿ ನಡೆದ ಈ ಟೂರ್ನಿಯ 20ನೇ ಪಂದ್ಯದಲ್ಲಿ ಎಂಐ ಕೇಪ್ಟೌನ್ ಹಾಗೂ ಜೋಬರ್ಗ್ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಮ್ಯಾಚ್ನಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಎಂಐ ಕೇಪ್ಟೌನ್ ಪರ ಆರಂಭಿಕನಾಗಿ ಕಣಕ್ಕಿಳಿದ ರಯಾನ್ ರಿಕೆಲ್ಟನ್ 60 ಎಸೆತಗಳಲ್ಲಿ 9 ಸಿಕ್ಸ್ ಹಾಗೂ 8 ಫೋರ್ಗಳೊಂದಿಗೆ ಅಜೇಯ 113 ರನ್ ಬಾರಿಸಿದರು. ಈ ಶತಕದ ನೆರವಿನೊಂದಿಗೆ ಎಂಐ ಕೇಪ್ಟೌನ್ ತಂಡವು 20 ಓವರ್ಗಳಲ್ಲಿ 234 ರನ್ ಕಲೆಹಾಕಿತು.
ಈ ಗುರಿಯನ್ನು ಬೆನ್ನತ್ತಿದ ಜೋಬರ್ಗ್ ಸೂಪರ್ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 198 ರನ್ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ಎಂಐ ಕೇಪ್ಟೌನ್ ತಂಡವು 36 ರನ್ಗಳ ಜಯ ಸಾಧಿಸಿದೆ.
ಇನ್ನು ಈ ಪಂದ್ಯದಲ್ಲಿ ಸೆಂಚುರಿ ಸಿಡಿಸುವ ಮೂಲಕ ರಯಾನ್ ರಿಕೆಲ್ಟನ್ ಸೌತ್ ಆಫ್ರಿಕಾ ಟಿ20 ಲೀಗ್ನ ಸೀಸನ್ವೊಂದರಲ್ಲಿ 2 ಶತಕ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಡರ್ಬನ್ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯದಲ್ಲಿ 113 ರನ್ಗಳ ಇನಿಂಗ್ಸ್ ಆಡಿದ್ದರು. ಈ ಮೂಲಕ ರಯಾನ್ ರಿಕೆಲ್ಟನ್ ಸೌತ್ ಆಫ್ರಿಕಾ ಟಿ20 ಲೀಗ್ ಸೀಸನ್ವೊಂದರಲ್ಲಿ 2 ಶತಕ ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.
Published on: Jan 11, 2026 09:36 AM
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

