ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದ ಸಚಿವ ಎಸ್. ಜೈಶಂಕರ್
ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್ ರಷ್ಯಾಗೆ ಭೇಟಿ ನೀಡಿದ್ದಾರೆ. ಇಂದು ಬೆಳಗ್ಗೆ ಎಸ್ ಜೈಶಂಕರ್ ಅವರು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ನವದೆಹಲಿ ಮತ್ತು ಮಾಸ್ಕೋ ನಡುವಿನ ಸಂಬಂಧಗಳನ್ನು "ಎರಡನೇ ಮಹಾಯುದ್ಧದ ನಂತರ ವಿಶ್ವದ ಪ್ರಮುಖ ಸಂಬಂಧಗಳಲ್ಲಿ ಅತ್ಯಂತ ಸ್ಥಿರ" ಎಂದು ಒತ್ತಿ ಹೇಳಿದರು.
ಮಾಸ್ಕೋ, ಆಗಸ್ಟ್ 21: ಮೂರು ದಿನಗಳ ರಷ್ಯಾ ಭೇಟಿಯಲ್ಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್ (S Jaishankar) ಅವರು ಇಂದು ಸಂಜೆ ಮಾಸ್ಕೋದಲ್ಲಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿಯಾದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald Trump) ಸರ್ಕಾರ ಭಾರತದ ಸರಕುಗಳ ಮೇಲೆ ಶೇ. 50ರಷ್ಟು ವ್ಯಾಪಾರ ಸುಂಕಗಳನ್ನು ಹೇರಿರುವ ಬೆನ್ನಲ್ಲೇ ಈ ಉನ್ನತ ಮಟ್ಟದ ಸಭೆ ನಡೆಯಿತು. ಭಾರತವು ರಷ್ಯಾದ ಕಚ್ಚಾ ತೈಲವನ್ನು ಖರೀದಿಸುವ ಮೂಲಕ ಉಕ್ರೇನ್ ಮೇಲಿನ ರಷ್ಯಾದ ಯುದ್ಧಕ್ಕೆ ಪರೋಕ್ಷವಾಗಿ ಹಣಕಾಸು ಒದಗಿಸುತ್ತಿದೆ ಎಂದು ಅಮೆರಿಕ ಆರೋಪಿಸಿತ್ತು.
ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ