ಶಾಸಕ ಸ್ಥಾನ ಅಸಿಂಧುಗೊಂಡ ಬಗ್ಗೆ ಸುಬ್ಬಾರೆಡ್ಡಿ ಫಸ್ಟ್​ ರಿಯಾಕ್ಷನ್​​: ಕಾಂಗ್ರೆಸ್​​ ನಾಯಕ ಹೇಳಿದ್ದೇನು?

Edited By:

Updated on: Feb 18, 2026 | 2:12 PM

ಬಾಗೇಪಲ್ಲಿ ಕ್ಷೇತ್ರದ ಅನರ್ಹ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ತಮ್ಮ ಸ್ಥಾನ ಅಸಿಂಧುಗೊಂಡಿರುವ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದ ತೀರ್ಪನ್ನು ಗೌರವಿಸುತ್ತೇನೆ. ಇದು ದೊಡ್ಡ ಪ್ರಕರಣವಲ್ಲ, ಸೋತವರು ರಾಜಕೀಯ ದ್ವೇಷ ತೀರಿಸಿಕೊಂಡರೆ ಮುಂದಿನ ದಿನಗಳಲ್ಲಿ ಕಷ್ಟವಾಗಬಹುದು ಎಂದು ಹೇಳಿದ್ದಾರೆ. ದೆಹಲಿಗೆ ತೆರಳಿರುವ ಸುಬ್ಬಾರೆಡ್ಡಿ, ಅಲ್ಲಿಂದ ಮರಳಿದ ನಂತರ ವಿಸ್ತೃತ ಪ್ರತಿಕ್ರಿಯೆ ನೀಡುವುದಾಗಿ ಹೇಳಿದ್ದಾರೆ.

ದೇವನಹಳ್ಳಿ, ಫೆಬ್ರವರಿ 18: ಬಾಗೇಪಲ್ಲಿ ಶಾಸಕ ಸ್ಥಾನ ಅಸಿಂಧುಗೊಂಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಎಸ್.ಎನ್. ಸುಬ್ಬಾರೆಡ್ಡಿ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ನ್ಯಾಯಾಲಯದ ತೀರ್ಪನ್ನು ಸಂಪೂರ್ಣವಾಗಿ ಗೌರವಿಸುವುದಾಗಿ ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು , ಇದು ದೊಡ್ಡ ಪ್ರಕರಣವೇನಲ್ಲ. ಸೋತಿರುವವರೆಲ್ಲರೂ ಈ ರೀತಿ ರಾಜಕೀಯ ದ್ವೇಷ ತೀರಿಸಿಕೊಳ್ಳಲು ಮುಂದಾದರೆ, ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಕಷ್ಟವಾಗುತ್ತದೆ.  ಪ್ರಸ್ತುತ ತಾನು ದೆಹಲಿಗೆ ತೆರಳುತ್ತಿದ್ದು, ಅಲ್ಲಿಂದ ಮರಳಿದ ನಂತರ ಈ ಕುರಿತು ವಿಸ್ತೃತವಾಗಿ ಪ್ರತಿಕ್ರಿಯೆ ನೀಡುವುದಾಗಿ ಅವರು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More