ಡಾ. ರಾಜ್ ಬಗ್ಗೆ ಅವಹೇಳನಕಾರಿ ಮಾತು: ಆರ್​ಜಿವಿಗೆ ಸಾರಾ ಗೋವಿಂದು ಕ್ಲಾಸ್​

Edited By:

Updated on: Jun 09, 2025 | 6:43 PM

ಡಾ. ರಾಜ್​ಕುಮಾರ್ ಅವರು ಅಮಿತಾಭ್ ಬಚ್ಚನ್ ಅಭಿನಯದ ಚಿತ್ರಗಳನ್ನು ರಿಮೇಕ್ ಮಾಡಿ ಕನ್ನಡದಲ್ಲಿ ಖ್ಯಾತಿ ಗಳಿಸಿದರು ಎಂದು ಹೇಳಿಕೆ ನೀಡಿರುವ ರಾಮ್ ಗೋಪಾಲ್ ವರ್ಮಾ ಬಗ್ಗೆ ಅಣ್ಣಾವ್ರ ಫ್ಯಾನ್ಸ್ ಗರಂ ಆಗಿದ್ದಾರೆ. ಈ ಬಗ್ಗೆ ಸಾರಾ ಗೋವಿಂದು ಪ್ರತಿಕ್ರಿಯೆ ನೀಡಿದ್ದಾರೆ. ರಾಮ್ ಗೋಪಾಲ್ ವರ್ಮಾ ಹೇಳಿಕೆಯನ್ನು ಸಾ.ರಾ. ಗೋವಿಂದು ಅವರು ಖಂಡಿಸಿದ್ದಾರೆ.

ಡಾ. ರಾಜ್​ಕುಮಾರ್ (Dr Rajkumar) ಅವರು ಅಮಿತಾಭ್ ಬಚ್ಚನ್ ನಟನೆಯ ಸಿನಿಮಾಗಳನ್ನು ರಿಮೇಕ್ ಮಾಡಿ ಕನ್ನಡದಲ್ಲಿ ಫೇಮಸ್ ಆದರು ಎಂದು ಹೇಳಿಕೆ ನೀಡಿರುವ ರಾಮ್ ಗೋಪಾಲ್ ವರ್ಮಾ ಬಗ್ಗೆ ಅಣ್ಣಾವ್ರ ಅಭಿಮಾನಿಗಳು ಗರಂ ಆಗಿದ್ದಾರೆ. ಈ ಬಗ್ಗೆ ಸಾರಾ ಗೋವಿಂದು ಕೂಡ ಮಾತನಾಡಿದ್ದಾರೆ. ರಾಮ್ ಗೋಪಾಲ್ ವರ್ಮಾ (Ram Gopal Varma) ಹೇಳಿಕೆಯನ್ನು ಸಾ.ರಾ. ಗೋವಿಂದು ಖಂಡಿಸಿದ್ದಾರೆ. ‘ಅಣ್ಣಾವ್ರ ಬಗ್ಗೆ ಮಾತನಾಡುವುದಕ್ಕೂ ಮುನ್ನ ಇತಿಹಾಸ ತಿಳಿದುಕೊಳ್ಳಬೇಕು. ರಾಮ್ ಗೋಪಾಲ್ ವರ್ಮಾ ಹೇಳಿಕೆಯಿಂದ ನನಗೆ ಅಹಸ್ಯ ಆಗುತ್ತಿದೆ. ಅವನೊಬ್ಬ ಹುಚ್ಚ. ಅವನ ಬಗ್ಗೆ ನಾವು ಮಾತನಾಡುವುದೇ ವ್ಯರ್ಥ. ಕಮಲ್ ಹಾಸನ್ ರೀತಿ ಆರ್​ಜಿವಿ ಮಾತನಾಡಿದ್ದಾನೆ. ಅವನಿಗೆ ನಾವು ಮಹತ್ವ ನೀಡುವ ಅವಶ್ಯಕತೆ ಇಲ್ಲ’ ಎಂದು ಸಾ.ರಾ. ಗೋವಿಂದು (Sa Ra Govindu) ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More