ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು ಎಚ್ಚರಿಕೆ

Updated on: May 29, 2025 | 5:07 PM

‘ಮುಂದಿನ ದಿನಗಳಲ್ಲಿ ಯಾವುದೇ ವ್ಯಕ್ತಿ ಇನ್ನೊಂದು ರಾಜ್ಯದ ಬಗ್ಗೆ ಮಾತನಾಡಬೇಕಾದರೆ ಎಚ್ಚರಿಕೆಯಿಂದ ಮಾತನಾಡಬೇಕು ಎಂಬುದಕ್ಕೆ ಇದೊಂದು ಪಾಠ. ನಾಡಿನ ಎಲ್ಲ ಸಾಹಿತಿಗಳು ಕೂಡ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿದ್ದಾರೆ. ಕಮಲ್ ಹಾಸನ್ ಅವರಿಂದ ಕನ್ನಡ ಭಾಷೆಗೆ ಆದ ಅವಮಾನವನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಸಾ.ರಾ. ಗೋವಿಂದು ಅವರು ಹೇಳಿದ್ದಾರೆ.

ಕಮಲ್ ಹಾಸನ್ (Kamal Haasan) ಅವರು ನಟಿಸಿರುವ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಜೂನ್ 5ರಂದು ರಿಲೀಸ್ ಆಗಬೇಕಿರುವ ಈ ಚಿತ್ರಕ್ಕೆ ಕರ್ನಾಟಕದಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಕನ್ನಡದ (Kannada) ಬಗ್ಗೆ ಕಮಲ್ ಹಾಸನ್ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಹಾಗಾಗಿ ಅವರು ಕ್ಷಮೆ ಕೇಳುವ ತನಕ ಸಿನಿಮಾ ಬಿಡುಗಡೆಗೆ ಅವಕಾಶ ನೀಡುವುದಿಲ್ಲ ಎಂದು ಕರ್ನಾಟಕ ಚಲನಚಿತ್ರ ಮಂಡಳಿ ಮಾಜಿ ಅಧ್ಯಕ್ಷ ಸಾ.ರಾ. ಗೋವಿಂದು (Sa Ra Govindu) ಹೇಳಿದ್ದಾರೆ. ‘ಹಂಚಿಕೆದಾರರು ಕೂಡ ನಮ್ಮ ಜೊತೆ ಇದ್ದಾರೆ. ಕಮಲ್ ಹಾಸನ್ ಕ್ಷಮೆ ಕೇಳಲೇಬೇಕು. ಅವರ ಉದ್ಧಟತನವನ್ನು ನಾನು ಮಾಧ್ಯಮದಲ್ಲಿ ನೋಡಿದ್ದೇನೆ. ಕ್ಷಮೆ ಕೇಳದ ಹೊರತು ಅವರು ಕರ್ನಾಟಕದಲ್ಲಿ ಹೇಗೆ ಸಿನಿಮಾದ ವ್ಯಾಪಾರ ಮಾಡುತ್ತಾರೆ ಎಂಬುದನ್ನು ನಾವು ನೋಡುತ್ತೇವೆ’ ಎಂದಿದ್ದಾರೆ ಸಾ.ರಾ. ಗೋವಿಂದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More