ಚೇತನ್ ಇನ್ನಾದರೂ ಮನುಷ್ಯನಾಗು: ವಿವಾದದ ಬಳಿಕ ಸಾರಾ ಗೋವಿಂದು ಕಿವಿಮಾತು

Updated on: May 06, 2026 | 11:13 AM

ನಟ ‘ಆ ದಿನಗಳು’ ಚೇತನ್ ಅವರು ಡಾ. ರಾಜ್​ಕುಮಾರ್ ಸಮಾಧಿ ಬಗ್ಗೆ ನೀಡಿದ ಹೇಳಿಕೆಗೆ ಸಾರಾ ಗೋವಿಂದು ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಚೇತನ್ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ಕೂಡ ಮಾಡಲಾಗಿದೆ. ಈ ವೇಳೆ ಸಾರಾ ಗೋವಿಂದು ಅವರು ಮಾತನಾಡಿದ ವಿಡಿಯೋ ಇಲ್ಲಿದೆ.

ನಟ ‘ಆ ದಿನಗಳು’ ಚೇತನ್ (Chetan Ahimsa) ಅವರು ಡಾ. ರಾಜ್​ಕುಮಾರ್ ಸಮಾಧಿ ಬಗ್ಗೆ ನೀಡಿದ ಹೇಳಿಕೆಗೆ ಸಾರಾ ಗೋವಿಂದು ಅವರು ಖಾರವಾಗಿ ಪ್ರತಿಕ್ರಿಯಿಸಿದರು. ಚೇತನ್ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ಕೂಡ ಮಾಡಲಾಗಿದೆ. ಈ ವೇಳೆ ಸಾರಾ ಗೋವಿಂದು ಅವರು ಮಾತನಾಡಿದ ವಿಡಿಯೋ ಇಲ್ಲಿದೆ. ‘ಗೌರಿ ಲಂಕೇಶ್ ಅವರ ಪಾರ್ಥೀವ ಶರೀರ ನೋಡಲು ಹೋದಾಗ ರವೀಂದ್ರ ಕಲಾಕ್ಷೇತ್ರದಲ್ಲಿ ರೀ ವಾಟಾಳ್ ಅವರೇ ಅಂತ ಕರೆದಿದ್ದ ಈ ಅಯೋಗ್ಯ. ಆವತ್ತೇ ಜನರು ಆಕ್ರೋಶಕ್ಕೆ ಒಳಗಾಗಿದ್ದರು. ನಿನಗೆ ತಂದೆ-ತಾಯಿ ಸಂಸ್ಕಾರ ಹೇಳಿಕೊಟ್ಟಿಲ್ಲವಾ? ಇನ್ಮೇಲಾದರೂ ಮನುಷ್ಯನಾಗು. ಇನ್ಮುಂದೆ ಯಾರ ಬಗ್ಗೆಯಾದರೂ ಮಾತನಾಡುವಾಗ ಅವರ ಚರಿತ್​ರೆ ತಿಳ್ಕೋ’ ಎಂದು ಚೇತನ್ ಅವರಿಗೆ ಸಾರಾ ಗೋವಿಂದು (Sa Ra Govindu) ಕಿವಿಮಾತು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More