ಜೆಡಿಎಸ್ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ: ಜಿಟಿಡಿ ವಿರುದ್ಧ ಸ್ಪರ್ಧೆಗೆ ಸಿದ್ದ ಎಂದ ಸಾರಾ ಮಹೇಶ್
ಸಾ.ರಾ. ಮಹೇಶ್ ಅವರು ಜಿ.ಟಿ.ದೇವೇಗೌಡರ ವಿರುದ್ಧ ಚಾಮುಂಡೇಶ್ವರಿಯಲ್ಲಿ ಸ್ಪರ್ಧಿಸಲು ಸಿದ್ಧರಿರುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ಶಾಸಕರು ಸಕ್ರಿಯವಾಗಿಲ್ಲದ ಕಾರಣ, ಪಕ್ಷದ ವರಿಷ್ಠರಾದ ಹೆಚ್.ಡಿ. ದೇವೇಗೌಡ ಮತ್ತು ಹೆಚ್.ಡಿ. ಕುಮಾರಸ್ವಾಮಿ ಅವರ ತೀರ್ಮಾನಕ್ಕೆ ಬದ್ಧನಾಗಿರುವುದಾಗಿ ಹೇಳಿದ್ದಾರೆ. ಕೆ.ಆರ್. ನಗರ ಅಥವಾ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ತಾವು ಸಿದ್ಧ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು, ಜನವರಿ 18: ವಿಧಾನಸಭೆ ಚುನಾವಣೆ ಇನ್ನೂ ಎರಡೂವರೆ ವರ್ಷ ಬಾಕಿ ಇದೆ. ಅದಾಗಲೇ ಜೆಡಿಎಸ್ನಲ್ಲಿ ಟಿಕೆಟ್ ಹಂಚಿಕೆ ಚರ್ಚೆ ಹಾಗೂ ಚುನಾವಣಾ ರಣತಂತ್ರ ಶುರುವಾಗಿದೆ. ಹೀಗಿರುವಾಗ ಜೆಡಿಎಸ್ ಮುಖಂಡ ಸಾ.ರಾ. ಮಹೇಶ್, ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ. ದೇವೇಗೌಡರ ವಿರುದ್ಧ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಪಕ್ಷದ ನಿರ್ದೇಶನದಂತೆ ಸ್ಪರ್ಧಿಸಲು ಸಿದ್ಧವಿರುವುದಾಗಿ ಘೋಷಿಸಿದ್ದಾರೆ. ಹಲವು ಬಾರಿ ಜಿ.ಟಿ. ದೇವೇಗೌಡರನ್ನು ಮನವೊಲಿಸುವ ಪ್ರಯತ್ನ ಮಾಡಲಾಗಿದೆ ಎಂದು ಹೇಳಿರುವ ಸಾ.ರಾ. ಮಹೇಶ್, ಈಗ ಅವರ ಮನವೊಲಿಕೆಯ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
