4 ಸೀಸನ್ಗಳಲ್ಲಿ 3 ಬಾರಿ ‘ಸನ್ರೈಸರ್ಸ್’ ಚಾಂಪಿಯನ್ಸ್
Pretoria Capitals vs Sunrisers Eastern Cape, Final: ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡದ ನಾಯಕ ಟ್ರಿಸ್ಟನ್ ಸ್ಟಬ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿದ್ದರು.
ಸೌತ್ ಆಫ್ರಿಕಾ ಟಿ20 ಲೀಗ್ನ 4ನೇ ಸೀಸನ್ನಲ್ಲೂ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೇಪ್ ಟೌನ್ನ ನ್ಯೂಲ್ಯಾಂಡ್ಸ್ ಸ್ಟೇಡಿಯಂನಲ್ಲಿ ನಡೆದ ಈ ಬಾರಿಯ ಫೈನಲ್ನಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ಹಾಗೂ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು.
ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡದ ನಾಯಕ ಟ್ರಿಸ್ಟನ್ ಸ್ಟಬ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವು 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿದ್ದರು.
ಈ ಗುರಿಯನ್ನು 19.2 ಓವರ್ಗಳಲ್ಲಿ ಚೇಸ್ ಮಾಡುವ ಮೂಲಕ ಸನ್ರೈಸರ್ಸ್ ಈಸ್ಟರ್ನ್ ಕೇಪ್ ತಂಡವು 6 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಮೂರನೇ ಬಾರಿ ಸೌತ್ ಆಫ್ರಿಕಾ ಟಿ20 ಲೀಗ್ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.
ಇದಕ್ಕೂ ಮುನ್ನ 2023 ಮತ್ತು 2024 ರಲ್ಲಿ ಸನ್ರೈಸರ್ಸ್ ಈಸ್ಟರ್ಸ್ ಕೇಪ್ ತಂಡ ಚಾಂಪಿಯನ್ ಪಟ್ಟಕ್ಕೇರಿದ್ದರು. ಇನ್ನು 2025 ರಲ್ಲಿ ರನ್ನರ್ ಅಪ್ ಪ್ರಶಸ್ತಿ ಪಡೆದುಕೊಂಡಿದ್ದರು. ಇದೀಗ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.

