4 ಸೀಸನ್​ಗಳಲ್ಲಿ 3 ಬಾರಿ ‘ಸನ್​ರೈಸರ್ಸ್’​ ಚಾಂಪಿಯನ್ಸ್

Updated on: Jan 26, 2026 | 8:26 AM

Pretoria Capitals vs Sunrisers Eastern Cape, Final: ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡದ ನಾಯಕ ಟ್ರಿಸ್ಟನ್ ಸ್ಟಬ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿದ್ದರು.

ಸೌತ್ ಆಫ್ರಿಕಾ ಟಿ20 ಲೀಗ್​ನ 4ನೇ ಸೀಸನ್​ನಲ್ಲೂ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಕೇಪ್​ ಟೌನ್​ನ ನ್ಯೂಲ್ಯಾಂಡ್ಸ್​ ಸ್ಟೇಡಿಯಂನಲ್ಲಿ ನಡೆದ ಈ ಬಾರಿಯ ಫೈನಲ್​ನಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ಹಾಗೂ ಸನ್​ರೈಸರ್ಸ್ ಈಸ್ಟರ್ನ್ ಕೇಪ್ ತಂಡಗಳು ಮುಖಾಮುಖಿಯಾಗಿದ್ದವು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್ ತಂಡದ ನಾಯಕ ಟ್ರಿಸ್ಟನ್ ಸ್ಟಬ್ಸ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವು 20 ಓವರ್​ಗಳಲ್ಲಿ 7 ವಿಕೆಟ್ ಕಳೆದುಕೊಂಡು 158 ರನ್ ಕಲೆಹಾಕಿದ್ದರು.

ಈ ಗುರಿಯನ್ನು 19.2 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ ಸನ್​ರೈಸರ್ಸ್​ ಈಸ್ಟರ್ನ್​ ಕೇಪ್  ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಮೂರನೇ ಬಾರಿ ಸೌತ್ ಆಫ್ರಿಕಾ ಟಿ20 ಲೀಗ್​ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಇದಕ್ಕೂ ಮುನ್ನ 2023 ಮತ್ತು 2024 ರಲ್ಲಿ ಸನ್​ರೈಸರ್ಸ್ ಈಸ್ಟರ್ಸ್​ ಕೇಪ್ ತಂಡ ಚಾಂಪಿಯನ್ ಪಟ್ಟಕ್ಕೇರಿದ್ದರು. ಇನ್ನು 2025 ರಲ್ಲಿ ರನ್ನರ್​ ಅಪ್ ಪ್ರಶಸ್ತಿ ಪಡೆದುಕೊಂಡಿದ್ದರು. ಇದೀಗ ಮತ್ತೊಮ್ಮೆ ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದ್ದಾರೆ.