Daily Devotional: ಅಯ್ಯಪ್ಪ ಮಾಲೆ ಧಾರಣೆಯ ಹಿಂದಿನ ಮಹತ್ವ ತಿಳಿಯಿರಿ
ಕಾರ್ತಿಕ ಮಾಸದಲ್ಲಿ ಲಕ್ಷಾಂತರ ಭಕ್ತರು ಅಯ್ಯಪ್ಪ ಮಾಲೆ ಧರಿಸುತ್ತಾರೆ. ಮಂಡಲ ದೀಕ್ಷೆ ಅಥವಾ ಅರ್ಥ ಮಂಡಲ ದೀಕ್ಷೆಯ ನಂತರ, 41 ದಿನಗಳ ದೀಕ್ಷೆಯನ್ನು ಪೂರ್ಣಗೊಳಿಸಿ ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆಯುತ್ತಾರೆ. ಈ ಮಾಲೆ ಧಾರಣೆಯ ಹಿಂದಿನ ಆಧ್ಯಾತ್ಮಿಕ ಮತ್ತು ಜ್ಯೋತಿಷ್ಯ ಮಹತ್ವವನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ವಿವರಿಸುತ್ತಾರೆ. ಈ ಲೇಖನದಲ್ಲಿ ಅದರ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗಿದೆ.
ಶಬರಿಮಲೆ ಎಂದಾಕ್ಷಣ ನಮಗೆ ಮೊದಲು ನೆನಪಿಗೆ ಬರೋದು ಅಯ್ಯಪ್ಪ ಸ್ವಾಮಿ ಮತ್ತು ಭಕ್ತಿಯಿಂದ ಮಾಲೆ ಧರಿಸುವ ಅವನ ಭಕ್ತರು. ಕಾರ್ತಿಕ ಮಾಸ ಆರಂಭವಾಗುತ್ತಿದ್ದಂತೆ ಲಕ್ಷಾಂತರ ಜನ ಅಯ್ಯಪ್ಪ ಮಾಲೆಯನ್ನು ಧರಿಸುತ್ತಾರೆ. ಕೆಲವರು ಮಂಡಲ ದೀಕ್ಷಾ, ಇನ್ನು ಕೆಲವರು ಅರ್ಥ ಮಂಡಲ ದೀಕ್ಷಾ ತೆಗೆದುಕೊಳ್ಳುತ್ತಾರೆ. 41 ದಿನಗಳ ದೀಕ್ಷೆ ಪಡೆದು ಶಬರಿಮಲೆಗೆ ತೆರಳಿ ಅಯ್ಯಪ್ಪನ ದರ್ಶನ ಪಡೆದು ಬಂದ ಬಳಿಕ ಪೂಜೆಯೊಂದಿಗೆ ಅಯ್ಯಪ್ಪ ಮಾಲೆಯನ್ನು ತೆಗೆಯುತ್ತಾರೆ. ಅಯ್ಯಪ್ಪ ಮಾಲೆ ಧಾರಣೆ ಹಿಂದಿನ ಮಹತ್ವವೇನು? ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ಉತ್ತರ ನೀಡಿದ್ದಾರೆ.
Published on: Nov 29, 2024 07:06 AM
Latest Videos