Video: ಶಬರಿಮಲೆ ದೇವಸ್ಥಾನ ಚಿನ್ನ ಕಳ್ಳತನ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

Updated on: Nov 17, 2025 | 5:15 PM

ಶಬರಿಮಲೆ ದೇವಸ್ಥಾನದ ದ್ವಾರಪಾಲಕ ಪ್ರತಿಮೆಗಳಿಂದ 4.54 ಕೆಜಿ ಚಿನ್ನದ ಲೇಪನ ಕಾಣೆಯಾದ ಪ್ರಕರಣದಲ್ಲಿ SIT ತನಿಖೆ ಚುರುಕುಗೊಂಡಿದೆ. ವೈಜ್ಞಾನಿಕ ಪರೀಕ್ಷೆಗಳಿಗಾಗಿ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಈಗಾಗಲೇ ವಶದಲ್ಲಿದ್ದಾರೆ. ಈ ಬೃಹತ್ ಚಿನ್ನ ಕಳ್ಳತನದ ಮೂಲವನ್ನು ಪತ್ತೆಹಚ್ಚಲು ತನಿಖಾ ತಂಡ ಕಾರ್ಯಪ್ರವೃತ್ತವಾಗಿದೆ.

ಶಬರಿಮಲೆ ದೇವಸ್ಥಾನದ (Sabarimala Gold Plating Scam) ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಯಲ್ಲಿನ ಚಿನ್ನದ ಲೇಪನ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದ ತನಿಖೆ ಚುರುಕುಗೊಂಡಿದೆ. ಇದೀಗ ಎಸ್​​​ಐಟಿ ಈ ಪ್ರಕರಣದ ತನಿಖೆಯನ್ನು ನಡೆಸುತ್ತಿದ್ದು, ದೇವಾಲಯದಲ್ಲಿ ವೈಜ್ಞಾನಿಕ ಪರೀಕ್ಷೆ ನಡೆಸುತ್ತಿದೆ. ಗರ್ಭಗುಡಿಯ ದ್ವಾರಪಾಲಕ ಶಿಲ್ಪ ಮತ್ತು ಚಿನ್ನದಿಂದ ಆವೃತವಾದ ಮರದ ಬಾಗಿಲಿನ ರಚನೆಯಿಂದ ಮಾದರಿಗಳನ್ನು ಸಂಗ್ರಹಿಸಲಾಗುತ್ತಿದೆ. ಈ ಬಗ್ಗೆ ವಿಡಿಯೋವೊಂದು ಎಎನ್​​​ಐ ಹಂಚಿಕೊಂಡಿದೆ. ತನಿಖೆಯ ಭಾಗವಾಗಿ ಬೆಂಗಳೂರು ಮೂಲದ ಉದ್ಯಮಿ ಉನ್ನಿಕೃಷ್ಣನ್ ಪೊಟ್ಟಿ ಅವರನ್ನು ಈಗಾಗಲೇ ಎಸ್​​​ಐಟಿ ವಶಪಡೆದುಕೊಂಡಿದ್ದು ತನಿಖೆಯನ್ನು ನಡೆಸುತ್ತಿದೆ. ಶಬರಿಮಲೆ ದೇವಸ್ಥಾನದ ಮುಂಭಾಗದಲ್ಲಿರುವ ದ್ವಾರಪಾಲಕರ ಪ್ರತಿಮೆಗೆಯಲ್ಲಿದ್ದ ಬರೋಬ್ಬರಿ 4.54 ಕೆಜಿ ಲೇಪನ ಕಾಣೆಯಾಗಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Follow Us
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More