ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ: ಏಪ್ರಿಲ್ 7ರಿಂದ ಸುಪ್ರೀಂ ಕೋರ್ಟ್‌ನಲ್ಲಿ ಮರುಪರಿಶೀಲನಾ ಅರ್ಜಿಗಳ ವಿಚಾರಣೆ

Edited By:

Updated on: Feb 16, 2026 | 12:54 PM

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದ ಮರುಪರಿಶೀಲನಾ ಅರ್ಜಿಗಳ ವಿಚಾರಣೆಯನ್ನು ಏಪ್ರಿಲ್ 7ರಿಂದ ಸುಪ್ರೀಂ ಕೋರ್ಟ್ ಆರಂಭಿಸಲಿದೆ. 2018ರ ತೀರ್ಪನ್ನು ಮರುಪರಿಶೀಲಿಸಲು ಒಂಭತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠವನ್ನು ರಚಿಸಲಾಗಿದೆ. ಈ ವಿಚಾರಣೆಯು ಏಪ್ರಿಲ್ 22ರವರೆಗೆ ನಡೆಯಲಿದ್ದು, ವಾದಿ-ಪ್ರತಿವಾದಿಗಳಿಗೆ ವಾದ ಮಂಡಿಸಲು ಕಾಲಾವಕಾಶ ನೀಡಲಾಗಿದೆ. ಕೇಂದ್ರ ಸರ್ಕಾರವೂ ಮರುಪರಿಶೀಲನೆಗೆ ಬೆಂಬಲ ನೀಡಿದೆ.

ದೆಹಲಿ, ಫೆಬ್ರವರಿ 16: ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್ ಮರುಪರಿಶೀಲನಾ ಅರ್ಜಿಗಳ ವಿಚಾರಣೆಗೆ ಒಪ್ಪಿಗೆ ನೀಡಿದೆ. ಏಪ್ರಿಲ್ 7ರಿಂದ ಈ ವಿಚಾರಣೆ ಆರಂಭವಾಗಲಿದ್ದು, ಒಂಭತ್ತು ನ್ಯಾಯಾಧೀಶರ ಸಾಂವಿಧಾನಿಕ ಪೀಠವು ಇದನ್ನು ನಡೆಸಲಿದೆ. 2018ರಲ್ಲಿ ಸುಪ್ರೀಂ ಕೋರ್ಟ್ ಸಾಂವಿಧಾನಿಕ ಪೀಠವು ಮಹಿಳೆಯರಿಗೆ ಶಬರಿಮಲೆಗೆ ಪ್ರವೇಶಕ್ಕೆ ಅವಕಾಶ ನೀಡಿ ತೀರ್ಪು ನೀಡಿತ್ತು. ಆದರೆ, ಈ ತೀರ್ಪಿನ ನಂತರ ಭಕ್ತರು ಮತ್ತು ಧಾರ್ಮಿಕ ಹೋರಾಟಗಾರರಿಂದ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಹಿಂದಿನ ತೀರ್ಪನ್ನು ಸಾಂವಿಧಾನಿಕ ಪೀಠವೇ ನೀಡಿರುವುದರಿಂದ, ಅದರ ಮರುಪರಿಶೀಲನೆಗೂ ಸಾಂವಿಧಾನಿಕ ಪೀಠವೇ ಬೇಕು. ಹೀಗಾಗಿ ಒಂಭತ್ತು ನ್ಯಾಯಾಧೀಶರ ಪೀಠವನ್ನು ರಚಿಸಲಾಗಿದೆ. ಏಪ್ರಿಲ್ 7 ಮತ್ತು 9ರಂದು ವಾದಿಗಳಿಗೆ, ಹಾಗೂ ಏಪ್ರಿಲ್ 14, 15 ಮತ್ತು 16ರಂದು ಪ್ರತಿವಾದಿಗಳಿಗೆ ವಾದ ಮಂಡಿಸಲು ಅವಕಾಶ ನೀಡಲಾಗಿದೆ. ಏಪ್ರಿಲ್ 14ರೊಳಗೆ ಲಿಖಿತ ರೂಪದಲ್ಲಿ ವಾದ-ಪ್ರತಿವಾದಗಳನ್ನು ಸಲ್ಲಿಸಲು ಸೂಚಿಸಲಾಗಿದೆ. ಈ ಮರುಪರಿಶೀಲನಾ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಕೂಡ ಸಹಮತ ವ್ಯಕ್ತಪಡಿಸಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Published on: Feb 16, 2026 12:52 PM
Loading...
Unable to load recommendations.
Follow Us
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More