AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್

ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್

ರಾಜೇಶ್ ದುಗ್ಗುಮನೆ
|

Updated on:Jun 12, 2026 | 1:12 PM

Share

ಸಚಿನ್ ತೆಂಡೂಲ್ಕರ್ ಅವರು ಕ್ರಿಕೆಟ್ ಜಗತ್ತು ಕಂಡ ಅತ್ಯಂತ ಅದ್ಭುತ ಆಟಗಾರ. ಅವರು ನೂರಾರು ಕೋಟಿ ರೂಪಾಯಿ ಸಂಗ್ರಹ ಮಾಡಿದ್ದಾರೆ. ಈಗ ಸಚಿನ್ ಅವರು ಖಾಸಗಿ ಜೆಟ್​​​ನಲ್ಲಿ ಕ್ರಿಕೆಟ್ ಆಡಿದ್ದಾರೆ ಎಂಬುದು ವಿಶೇಷ. ಈ ಸಂದರ್ಭದ ವಿಡಿಯೋ ಹಾಗೂ ಫೋಟೋಗಳು ವೈರಲ್ ಆಗಿ ಗಮನ ಸೆಳೆದಿವೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸಚಿನ್ ತೆಂಡೂಲ್ಕರ್ ಅವರು ತಮ್ಮ ನಿವೃತ್ತಿ ಜೀವನವನ್ನು ಎಂಜಾಯ್ ಮಾಡುತ್ತಿದ್ದಾರೆ. ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಆದರೆ, ಕ್ರಿಕೆಟ್ ಮೇಲಿನ ಪ್ರೀತಿ ಅವರಿಗೆ ಕಡಿಮೆ ಆಗಿಲ್ಲ. ಇದಕ್ಕೆ ಸಾಕ್ಷಿ ಎಂಬಂತಹ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋದಲ್ಲಿ ಅವರು ಕುಟುಂಬದ ಜೊತೆ ವಿಮಾನದಲ್ಲಿ ಕ್ರಿಕೆಟ್ ಆಡಿದ್ದಾರೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ಜೀವನ ಅಂದ್ರೆ ಈ ರೀತಿ ಇರಬೇಕು ಎಂದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jun 12, 2026 01:10 PM

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More