ಮಂಡ್ಯದಲ್ಲಿ ಮನಕಲಕುವ ಘಟನೆ: ಮಾನಸಿಕ ಅಸ್ವಸ್ಥ ತಾಯಿಯನ್ನು ಬೀದಿಯಲ್ಲಿ ಬಿಟ್ಟು ಹೋದ ಮಗ

Edited By:

Updated on: Jun 23, 2025 | 8:13 AM

ಹೆತ್ತ ತಾಯಿಯನ್ನೇ ಮಗನೊಬ್ಬ ಅನಾಥಳನ್ನಾಗಿ ಮಾಡಿ ರಸ್ತೆಯಲ್ಲಿ ಬಿಟ್ಟುಹೋದ ದಾರುಣ ಘಟನೆ ಮಂಡ್ಯ ಜಿಲ್ಲೆಯಿಂದ ವರದಿಯಾಗಿದೆ. ಮಾನಸಿಕ ಅಸ್ವಸ್ಥೆಯಾಗಿರುವ ವೃದ್ಧೆ ಬೀದಿಯಲ್ಲಿ ಅಲೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಆಕೆಯನ್ನು ರಕ್ಷಿಸಿದೆ. ವಿಡಿಯೋ ಇಲ್ಲಿದೆ.

ಮಂಡ್ಯ, ಜೂನ್ 23: ಮಾನಸಿಕ ಅಸ್ವಸ್ಥ ತಾಯಿಯನ್ನು ಮಗ ಬಿಟ್ಟು ರಸ್ತೆಯಲ್ಲಿ ಹೋಗಿರುವ ಮನಕಲಕುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ನಡೆದಿದೆ. ವೃದ್ಧೆಯ ವಿಡಿಯೋ‌ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ‘ಬರುತ್ತೇನೆ, ಇಲ್ಲೇ ಇರು’ ಎಂದು ರಸ್ತೆಯಲ್ಲಿ ತಾಯಿಯನ್ನು ಬಿಟ್ಟು ಮಗ ಹೋಗಿದ್ದ ಎನ್ನಲಾಗಿದೆ. ಮಗನ ಬರುವಿಕೆಗಾಗಿ ಕಾಯುತ್ತಿದ್ದ ತಾಯಿ, ‘ನನ್ನ ಮಗ ಬಂದು ಕರೆದುಕೊಂಡು‌ ಹೋಗುತ್ತಾನೆ’ ಎನ್ನುತ್ತಿದ್ದರು. ಸುಮಾರು 70 ರಿಂದ 80 ವರ್ಷದ ವೃದ್ಧೆಗೆ ಸ್ಥಳೀಯರು ಆಹಾರ ನೀಡಿ ರಕ್ಷಿಸಿದ್ದಾರೆ. ನಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವೃದ್ಧೆಯನ್ನು ರಕ್ಷಿಸಿ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ