ಸರ್ಕಾರದ ಸಾಧನೆ ಮತ್ತು ಬಿಜೆಪಿಯ ಅಪಪ್ರಚಾರ ಜನಕ್ಕೆ ತಿಳಿಸಲು ಸಮಾವೇಶ ಮಾಡುತ್ತಿದ್ದೇವೆ: ಕೆಎಂ ಶಿವಲಿಂಗೇಗೌಡ

Updated on: May 13, 2025 | 2:12 PM

ದೇಶದಲ್ಲಿ ಬೆಲೆಗಳ ಏರಿಕೆಗೆ ಕೇಂದ್ರ ಸರ್ಕಾರದ ತಪ್ಪು ಆರ್ಥಿಕ ನೀತಿಗಳೇ ಕಾರಣ ಅನ್ನೋದನ್ನು ಬಿಜೆಪಿ ನಾಯಕರು ಒಪ್ಪಿಕೊಳ್ಳೋದಿಲ್ಲ, ಹಾಗಾಗಿ ಸಾಧನೆ ಸಮಾವೇಶ ನಡಸೋದು ಅನಿವಾರ್ಯವಾಗಿದೆ, ಅರಸೀಕೆರೆಯಲ್ಲಿ ನಡೆಯುವ ಸಮಾವೇಶವನ್ನು ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಉದ್ಘಾಟಿಸಿ ಹೊಸ ಯೋಜನೆಗಳ ಘೋಷಣೆ ಮಾಡಲಿದ್ದಾರೆ ಎಂದು ಶಿವಲಿಂಗೇಗೌಡ ಹೇಳಿದರು.

ಬೆಂಗಳೂರು, ಮೇ 13: ಎರಡು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದ ಸಾಧನೆ ಮತ್ತು ಈ ಅವಧಿಯಲ್ಲಿ ಬಿಜೆಪಿ ನಾಯಕರು ಮಾಡಿದ ಅಪಪ್ರಚಾರವನ್ನು ರಾಜ್ಯದ ಜನತೆಗೆ ತಿಳಿಸಲು ಮೇ 30 ರಂದು ಅರಸೀಕೆರೆಯಲ್ಲಿ ಸಮಾವೇಶ ಮಾಡುತ್ತಿದ್ದೇವೆ ಎಂದು ಶಾಸಕ ಕೆಎಂ ಶಿವಲಿಂಗೇಗೌಡ ಹೇಳಿದರು. ರಾಜ್ಯದಲ್ಲಿ ಬೆಲೆಯೇರಿಕೆ ವಿಷಯದಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ನಾಯಕರು ಎರಡು ವರ್ಷಗಳ ಅಧಿಕಾರಾವಧಿಯಲ್ಲಿ ಕಾಂಗ್ರೆಸ್ ಸರ್ಕಾರ ಮಾಡಿದ ಸಾಧನೆಗಳ ಬಗ್ಗೆ ಒಂದನ್ನೂ ಉಲ್ಲೇಖಿಸಲಿಲ್ಲ. ರೈತರಿಗೆ ಹೆಚ್ಚು ಹಣ ಸಿಗಲಿ ಅಂತ ಹಾಲಿನ ದರ ಹೆಚ್ಚಳ ಮಾಡಿದರೆ, ಸರ್ಕಾರ ತಾನೇ ನುಂಗಲು ಬೆಲೆ ಏರಿಸಿದೆ ಎಂದು ಅಪಪ್ರಚಾರ ಮಾಡಿದರು. ಅವರ ಎಲ್ಲ ಸುಳ್ಳು ಆರೋಪಗಳಿಗೆ ಉತ್ತರ ನೀಡಬೇಕಿದೆ ಎಂದು ಶಿವಲಿಂಗೇಗೌಡ ಹೇಳಿದರು.

ಇದನ್ನೂ ಓದಿ: ನಾಲ್ಕು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ, ಮಿನಿಸ್ಟ್ರಾಗುವ ಆಸೆ ಖಂಡಿತ ಇದೆ: ಕೆಎಂ ಶಿವಲಿಂಗೇಗೌಡ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ