ಮೇಕೆದಾಟು ಪಾದಯಾತ್ರೆ ವೇಳೆ ಪರಸ್ಪರ ತಬ್ಬಿಕೊಂಡು ಉಭಯ ಕುಶಲೋಪರಿ ವಿಚಾರಿಸಿಕೊಂಡ ಸಾಧು ಕೋಕಿಲ-ಮಧು ಬಂಗಾರಪ್ಪ
ಹಾಸ್ಯ ನಟ ಸಾಧು ಕೋಕಿಲ ಅವರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ತಾವು ಓರ್ವ ಕಲಾವಿದನಾಗಿ ಈ ಪಾದಯಾತ್ರೆಗೆ ಬಂದಿರುವುದಾಗಿ ಅವರು ಈ ಮೊದಲು ಹೇಳಿಕೊಂಡಿದ್ದರು.
ಮೇಕೆದಾಟು ಯೋಜನೆ ಜಾರಿಗಾಗಿ ಕಾಂಗ್ರೆಸ್ ನೇತೃತ್ವದಲ್ಲಿ ಪಾದಯಾತ್ರೆ ಆರಂಭ ಆಗಿದೆ. ಇದರಲ್ಲಿ ಅನೇಕರು ಭಾಗವಹಿಸುತ್ತಿದ್ದಾರೆ. ಕನ್ನಡ ಚಿತ್ರರಂಗದವರು ಕೂಡ ಇದರಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಾಸ್ಯ ನಟ ಸಾಧು ಕೋಕಿಲ ಅವರು ಈ ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ತಾವು ಓರ್ವ ಕಲಾವಿದನಾಗಿ ಈ ಪಾದಯಾತ್ರೆಗೆ ಬಂದಿರುವುದಾಗಿ ಅವರು ಈ ಮೊದಲು ಹೇಳಿಕೊಂಡಿದ್ದರು. ಈ ಮೂಲಕ ತಾವು ಯಾವುದೇ ಪಕ್ಷವನ್ನು ಪ್ರತಿನಿಧಿಸುತ್ತಿಲ್ಲ ಎಂಬುದನ್ನು ಸ್ಪಷ್ಟಪಡಿಸಿದ್ದರು. ಇಂದಿನ (ಜನವರಿ 10) ಪಾದಯಾತ್ರೆ ವೇಳೆ ಸಾಧು ಕೋಕಿಲ ಹಾಗೂ ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪ ಭೇಟಿ ಆದರು. ಮಧು ಬಂಗಾರಪ್ಪ ಅವರು ಕೆಲ ಕಾಲ ಕನ್ನಡ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದರು. ರಾಜಕಾರಣಕ್ಕೆ ಇಳಿದ ನಂತರವೂ ಚಿತ್ರರಂಗದವರ ಜತೆ ಒಳ್ಳೆಯ ನಂಟು ಇಟ್ಟುಕೊಂಡಿದ್ದಾರೆ. ಈ ಕಾರಣಕ್ಕೆ ಸಾಧು ಕೋಕಿಲ ಹಾಗೂ ಮಧು ಬಂಗಾರಪ್ಪ ನಡುವೆ ಒಳ್ಳೆಯ ಬಾಂಧವ್ಯ ಇದೆ. ಹೀಗಾಗಿ ಇಬ್ಬರೂ ಉಭಯ ಕುಶಲೋಪರಿ ವಿಚಾರಿಸಿಕೊಂಡಿದ್ದಾರೆ.
ಇದನ್ನೂ ಓದಿ: ‘ಕಾಂಗ್ರೆಸ್ ಸದಸ್ಯತ್ವ ನಾನು ಪಡೆದಿಲ್ಲ; ಕಲಾವಿದರಿಗೆ ಪಕ್ಷ ಇಲ್ಲ’: ಮೇಕೆದಾಟು ಪಾದಯಾತ್ರೆ ಬಗ್ಗೆ ಸಾಧು ಕೋಕಿಲ ಮಾತು
ಮೇಕೆದಾಟು ಪಾದಯಾತ್ರೆಗೆ ಶಿವಣ್ಣ ಯಾಕೆ ಬಂದಿಲ್ಲ? ಕಾರಣ ವಿವರಿಸಿದ ಮಧು ಬಂಗಾರಪ್ಪ